ಗ್ಯಾರಂಟಿ ಯೋಜನೆಗಳನ್ನ ನಾವು ರಾಜಕೀಯ ಉದ್ದೇಶಕ್ಕಾಗಿ ತಂದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.
ಮೈಸೂರು (ಜೂ.22): ಗ್ಯಾರಂಟಿ ಯೋಜನೆಗಳನ್ನ ನಾವು ರಾಜಕೀಯ ಉದ್ದೇಶಕ್ಕಾಗಿ ತಂದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆ ರದ್ದು ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಡ ಜನರ ಆರ್ಥಿಕ ಸುಧಾರಣೆಗಾಗಿ ತಂದಿರುವ ಈ ಯೋಜನೆಗಳ ಬಗ್ಗೆ ಕೆಲವರು ಟೀಕೆ ಟಿಪ್ಪಣಿ ಮಾಡುತ್ತಾರೆ. ನಿಲ್ಲಿಸುತ್ತಾರೆ ಎಂಬ ವದಂತಿ ಹಬ್ಬಿಸುತ್ತಿದ್ದಾರೆ. ಆದರೆ, ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಿಸುವ ಮಾತೇ ಇಲ್ಲ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಪೆಟ್ರೊಲ್, ಡೀಸಲ್ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರು ಕೂಡ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸಲ್ ಬೆಲೆ ಕಡಿಮೆ ಮಾಡಿಲ್ಲ. ಅಕ್ಕ ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಕಡಿಮೆ ಇದೆ. ವಿಪಕ್ಷಗಳ ಸುಖಾ ಸುಮ್ಮನೆ ಟೀಕೆ ಮಾಡುತ್ತಿವೆ ಅಷ್ಟೇ. ಇದಕ್ಕೆಲ್ಲಾ ಕಾರಣ ಅವೈಜ್ಞಾನಿಕ ಜಿಎಸ್ಟಿ ಜಾರಿ ಕಾರಣ ಎಂದು ಕಿಡಿಕಾರಿದರು.
undefined
ಹೋಮ್‌ವರ್ಕ್ ಮಾಡದ್ದಕ್ಕೆ ವಿದ್ಯಾರ್ಥಿಗೆ ರಕ್ತ, ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕ!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇಫ್ ಮಾಡಲು ಕೆಲವು ಸಚಿವ ಒತ್ತಡ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಡಾ. ಮಹದೇವಪ್ಪ ಅವರು, ನೀವು ತಿಳಿದ ಹಾಗೆ ಸಚಿವ ಸಂಪುಟದಲ್ಲಿ ಅದ್ಯಾವುದೇ ಚರ್ಚೆಯೂ ಆಗಿಲ್ಲ. ತಪ್ಪಿತಸ್ಥರಿಗೆ ಕಾನೂನಾತ್ಮಕ ಶಿಕ್ಷೆ ಆಗುತ್ತದೆ. ಆ ನಿಟ್ಟಿನಲ್ಲಿ ಪೋಲಿಸರು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಯೋಗ ಅತ್ಯಂತ ಪ್ರೇರಣೆ ಆಗಿದೆ: ಯೋಗದ ನಿಯಮಗಳನ್ನು ಪಾಲಿಸುವಲ್ಲಿ ಭಾರತ ಪ್ರಪಂಚದ ಇತರ ರಾಷ್ಟ್ರಗಳಿಗಿಂತ ಮುಂಚೂಣಿಯಲ್ಲಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು. ಮೈಸೂರು ಅರಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಆಯುಷ್ ಇಲಾಖೆ ಸಂಯುಕ್ತವಾಗಿ ಶುಕ್ರವಾರ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತಾರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ 10 ವರ್ಷವಾಗಿದೆ ಎಂದರು.
ಶಾಸಕ ಎ.ಎಸ್.ಪೊನ್ನಣ್ಣ ಪ್ರತಿಕೃತಿ ದಹನ: ಕೊಡವರ ಸಂಪ್ರದಾಯಕ್ಕೆ ಅಪಮಾನ ಎಂದು ಕಾಂಗ್ರೆಸ್ ಆಕ್ರೋಶ
ಯೋಗವನ್ನು ನಿಯಮ ಬದ್ಧವಾಗಿ ಪಾಲನೆ ಮಾಡುವುದರಿಂದ ಶಿಸ್ತು ಬದ್ಧ ಜೀವನ ನಡೆಸಿ, ಆರೋಗ್ಯದ ವೃದ್ಧಿ ಮಾಡಿಕೊಂಡು ಸಮಾಜ ಹಾಗೂ ಕುಟುಂಬವನ್ನು ಲವಲವಿಕೆಯಿಂದ ನೋಡಿಕೊಂಡು ಹೋಗಬಹುದು. ಕಳೆದು ಬಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ರೇಸ್ ಕೋರ್ಸ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಿ ಗಿನ್ನಿಸ್ ದಾಖಲೆಯನ್ನು ಮೈಸೂರು ಮಾಡಿತ್ತು ಎಂದು ಅವರು ಹೇಳಿದರು. ನಿರ್ದಿಷ್ಟವಾದ ದೇಹದ ಸಮಸ್ಯೆಗಳಿಗೆ ನಿರ್ದಿಷ್ಟವಾದ ಯೋಗ ಕ್ರಿಯೆಗಳನ್ನು ಮಾಡಿದ್ದಲ್ಲಿ ಆರೋಗ್ಯಯುತವಾಗಿರಲು ಸಾಧ್ಯ ಎಂಬುದನ್ನು ವೈದ್ಯಕೀಯ ಶಾಸ್ತ್ರ ಹಾಗೂ ತಜ್ಞರು ಹೇಳಿದ್ದಾರೆ ಎಂದರು.