ಗ್ಯಾರಂಟಿ ಬಡವರ ಸ್ಕೀಂ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ

Kannadaprabha News   | Kannada Prabha
Published : Jul 07, 2025, 06:40 AM IST
Siddaramaiah

ಸಾರಾಂಶ

: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತಮ್ಮ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಕುರಿತು ಭಾನುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದ ಅವರು ಗ್ಯಾರಂಟಿ ಯೋಜನೆಗಳು ಬಡವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರಾಯರಡ್ಡಿ ಅವರ ಹೇಳಿಕೆಯು ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ಕೊರತೆಯಾಗಿದೆ ಎನ್ನುವಂತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ಬಾರಿ ನಾವು ರಾಜ್ಯದ ಎಲ್ಲಾ ಶಾಸಕರ ಕ್ಷೇತ್ರಗಳಲ್ಲಿ ರಸ್ತೆ, ಸೇತುವೆ ನಿರ್ಮಾಣ, ದುರಸ್ತಿ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸ್ವಲ್ಪ ಹಣ ಕೊಡುತ್ತಿದ್ದೇವೆ. ಕೇವಲ ಕಾಂಗ್ರೆಸ್‌ ಶಾಸಕರಿಗೆ ಮಾತ್ರವಲ್ಲ, ಬಿಜೆಪಿ, ಜೆಡಿಎಸ್‌ ಶಾಸಕರ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದೇವೆ ಎಂದರು.

ಕೊಪ್ಪಳದ ಕುಕನೂರಿನ ಲ್ಯಾವಣಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ರೈತರೊಬ್ಬರು ತಮ್ಮ ಹೊಲಕ್ಕೆ ಹೋಗುವ ರಸ್ತೆ ಮಾಡಿಸಿಕೊಡುವಂತೆ ಕೇಳಿದಾಗ, ‘ನಿಂಗೆ ಅಕ್ಕಿ ಬೇಡ. ಇನ್ನೊಂದು ಬೇಡ ಎಂದರೆ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿ ಎಲ್ಲವೂ ಬಂದ್‌ ಆಗುತ್ತವೆ’ ಎಂದು ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ರಾಯರಡ್ಡಿ ಅವರದ್ದು ದುರಹಂಕಾರದ ನುಡಿ, ರಸ್ತೆ ಆಗಬೇಕು ಎಂದರೆ ಅಕ್ಕಿ ಕೇಳಬೇಡಿ ಎಂದು ರಾಯರಡ್ಡಿ ಹೇಳಿದ್ದಾರೆ. ಇದು ದುರಹಂಕಾರದ ಮಾತು. ರಾಜ್ಯದಲ್ಲಿ ಹಣಕಾಸಿನ ಸ್ಥಿತಿ ಹದಗೆಟ್ಟಿರುವುದಕ್ಕೆ ಇದು ಸಾಕ್ಷಿ

.- ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಗ್ಯಾರಂಟಿ ಬಂದ್‌ ಆಗಲ್ಲ:ರಾಯರಡ್ಡಿ ಈಗ ಉಲ್ಟಾ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಆ ಕುರಿತು ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಉಲ್ಟಾ ಹೊಡೆದಿದ್ದಾರೆ.

ಎಲ್ಲರಿಗಿಂತ ಮೊದಲೇ

ತಿಳಿಯುವುದು ಇಲ್ಲೇ!

ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂಗಳನ್ನು ಬಂದ್‌ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ ಎಂದು ‘ಕನ್ನಡಪ್ರಭ’ ನಿನ್ನೆ ವರದಿ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!