ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ: ಸಚಿವ ವೆಂಕಟೇಶ್‌

ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ದರ ಏರಿಕೆಯನ್ನು ಸಚಿವ ಕೆ. ವೆಂಕಟೇಶ್ ಸಮರ್ಥನೆ ಮಾಡಿಕೊಂಡರು.


ಚಾಮರಾಜನಗರ (ಏ.03): ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ದರ ಏರಿಕೆಯನ್ನು ಸಚಿವ ಕೆ. ವೆಂಕಟೇಶ್ ಸಮರ್ಥನೆ ಮಾಡಿಕೊಂಡರು. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬೆಲೆ ಏರಿಕೆಗೂ ಗ್ಯಾರಂಟಿಗೂ ಯಾವುದೇ ಸಂಬಂಧ ಇಲ್ಲ; 25 ವರ್ಷದ ಹಿಂದೆ ಇದ್ದ ಬೆಲೆಯನ್ನೇ ಈಗಲು ಮುಂದುವರಿಸಲು ಆಗುತ್ತಾ? ಎಂದು ಪ್ರಶ್ನಿಸಿದರು. ಹಾಲಿನ ದರ 4 ರು. ಏರಿಕೆಯಾದ ಹಣವನ್ನು ಸಂಪೂರ್ಣ ರೈತರಿಗೆ ಕೊಡುತ್ತೇವೆ, ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡಲು ಎಲ್ಲಾ ಹಾಲು ಒಕ್ಕೂಟಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಹಾಲು, ಮೊಸರು, ಕರೆಂಟು ಎಲ್ಲ ಜಾಸ್ತಿ ಆಯ್ತು ಅಂತ ಬೊಂಬಡಾ ಹೊಡಿತಿದ್ದಾರೆ, ಮನಮೋಹನ್ ಸರ್ಕಾರ ಇದ್ದಾಗ ಪೆಟ್ರೋಲ್ ಬೆಲೆ 60 ರು. ಇತ್ತು- ಈಗ 103 ರುಪಾಯಿ ಆಗಿದ್ರು ಯಾರೂ ಸಹ ಮಾತನಾಡ್ತಾನೆ ಇಲ್ಲ, ಇದು ಜನರಿಗೆ ಹೊರೆ ಅಲ್ವಾ, ಯಾಕೆ ಯಾರೂ ಕೇಳ್ತಾ ಇಲ್ಲ ಎಂದು ಬಿಜೆಪಿಗೆ ಸಚಿವ ವೆಂಕಟೇಶ್ ತಿರುಗೇಟು ಕೊಟ್ಟರು.

Latest Videos

ಬಿ.ವೈ.ವಿಜಯೇಂದ್ರ ಆಮರಣಾಂತರ ಉಪವಾಸ ಕೈಗೊಳ್ಳಲಿ: ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

ಹನಿಟ್ರ್ಯಾಪ್ ವಿಚಾರ ಮಾತನಾಡಲ್ಲ: ಸಚಿವ ರಾಜಣ್ಣ ಹಾಗೂ ಪುತ್ರನ ಹನಿ ಟ್ರ್ಯಾಪ್ ವಿಚಾರಕ್ಕೆ ಮಾತನಾಡಿ, ಈ ಕುರಿತು ಮಾತನಾಡಲ್ಲ. ತನಿಖೆ ಕುರಿತು ನನಿಗೇನು ಗೊತ್ತಿಲ್ಲ ಅವ್ರು ಕಂಪ್ಲೆಂಟ್ ಕೊಟ್ಟಿದ್ದಾರೆ ತನಿಖೆ ನಡೆಸುವುದಾಗಿ ರಾಜ್ಯ ಸರ್ಕಾರ ಹೇಳಿದೆ ಅವರು ಏನು ಕಂಪ್ಲೆಂಟ್ ಕೊಟ್ಟಿದ್ದಾರೊ ಅದರ ಪ್ರಕಾರ ತನಿಖೆಯಾಗುತ್ತೆ,ಹನಿಟ್ರ್ಯಾಪ್ ಮಾಡಿದ್ದಾರೆಂದು ರಾಜಣ್ಣ ಹೇಳಿದ್ದಾರೆ. ತನಿಖೆ ಮಾಡೋಣ ಸತ್ಯಾಸತ್ಯತೆ ಆಚೆ ಬರಲಿ ಎಂದರು.

ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕುಡಿಯುವ ನೀರಿನ ತೊಂದರೆ ಕಂಡುಬಂದಲ್ಲಿ ತಕ್ಷಣವೇ ಪರಿಹರಿಸಿ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹೊಸ ಪಕ್ಷ ಕಟ್ಟಿದವರ್ಯಾರೂ ಯಶಸ್ವಿಯಾಗಿಲ್ಲ ಎಂದ ಮುರುಗೇಶ ನಿರಾಣಿ ಡಿಕೆಶಿ ಜೊತೆ ಪಿಸುಮಾತು

ಜಿಲ್ಲೆಯಲ್ಲಿ ಎಲ್ಲಿಯೇ ಆಗಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗಬೇಕು. ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯ ವ್ಯವಸ್ಥೆ ಮೂಲಕ ನೀರು ಬರಬರಾಜು ಮಾಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರು ವ್ಯವಸ್ಥೆಯ ಬಗ್ಗೆ ಸಂಪೂರ್ಣವಾಗಿ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

click me!