ರಾಜ್ಯದ ಬಡ ಜನತೆಯ ಒಳಿತಿಗಾಗಿ ಗ್ಯಾರಂಟಿ ನೀಡುತ್ತಿದ್ದೇವೆ. ಹೊರತು ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಕುಷ್ಟಗಿ (ಜೂ.24): ರಾಜ್ಯದ ಬಡ ಜನತೆಯ ಒಳಿತಿಗಾಗಿ ಗ್ಯಾರಂಟಿ ನೀಡುತ್ತಿದ್ದೇವೆ. ಹೊರತು ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಹೊಸಪೇಟೆಯಿಂದ ಕಲಬುರಗಿಗೆ ಹೋಗುವ ಮಾರ್ಗ ಮಧ್ಯೆ ಕುಷ್ಟಗಿಯ ಪಟ್ಟಣದಲ್ಲಿ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಐದು ವರ್ಷಗಳ ಕಾಲ ನಾವು ಯಾವುದೇ ಗ್ಯಾರಂಟಿಯ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಇತ್ತೀಚೆಗೆ ನಡೆದ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳೇ ಸ್ವತಃ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಎಂದರು. ಪಟ್ಟಣದಲ್ಲಿರುವ ಶಾದಿ ಮಹಲ್ ದುರಸ್ತಿಯ ಕುರಿತು ಮುಸ್ಲಿಂ ಸಮಾಜದವರು ನಮ್ಮ ಗಮನಕ್ಕೆ ತಂದಿದ್ದಾರೆ. ಈ ಶಾದಿಮಹಲ್ ಮರು ನಿರ್ಮಾಣಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ತಿಳಿಸಲಾಗಿದ್ದು, ಸುಮಾರು ₹2 ಕೋಟಿ ಅನುದಾನ ಮಂಜೂರು ಮಾಡಿಸಲು ಮುಂದಾಗಲಾಗುವುದು ಎಂದರು. ಈ ಸಂದರ್ಭ ಮುಖಂಡರಾದ ಮೈನುದ್ದಿನ್ ಮುಲ್ಲಾ, ಉಮೇಶ ಮಂಗಳೂರು, ಅಹ್ಮದ ಪಟೇಲ್ ಸೇರಿದಂತೆ ಅನೇಕರಿದ್ದರು.
undefined
ಸಿದ್ದರಾಮಯ್ಯ ಸರ್ಕಾರ ಬೆಲೆ ಏರಿಕೆ ಸಮರ್ಥಿಸಿಕೊಳ್ಳುವುದು ನಾಚಿಕೆಗೇಡು: ಮಾಜಿ ಸಚಿವ ಎನ್.ಮಹೇಶ್
ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿರುವ ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು. ಕಳೆದ 10 ವರ್ಷಗಳಿಂದ ದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬರೀ ಸುಳ್ಳು ಹೇಳುತ್ತಾ ದಿನಗಳನ್ನು ಕಳೆದಿದ್ದಾರೆ.
ಬಡಜನರ, ಮಧ್ಯಮ ವರ್ಗದ ಜನರ ಮತ್ತು ರೈತರ ಪರವಾಗಿ ಯಾವುದೇ ಒಂದು ಕೆಲಸ ಮಾಡಿಲ್ಲ. ಬರೀ ಶ್ರೀಮಂತರ ಪರವಾಗಿ ಮತ್ತು ಕಾರ್ಪೊರೇಟ್ ವಲಯದವರಿಗೆ ಲಾಭ ಮಾಡುವಂತೆ ಕೆಲಸ ಮಾಡಿದ್ದಾರೆ. ನರೇಂದ್ರ ಮೋದಿ ಬರೀ ಸುಳ್ಳು ಹೇಳುತ್ತಾ ಬಂದಿದ್ದಾರೆ. ಈಗ ಚುನಾವಣೆಯಲ್ಲಿ ಮತ್ತೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯವರ ಸುಳ್ಳು ಭರವಸೆಗಳಿಗೆ ಮೋಸ ಹೋಗಬಾರದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ಬಡವರು, ದೀನ ದಲಿತರು, ಹೆಣ್ಣುಮಕ್ಕಳು ನೆಮ್ಮದಿಯ ಬದುಕು ಕಂಡುಕೊಂಡಿದ್ದಾರೆ.
ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ತಗ್ಗಿದ ಅಪಘಾತ: ಈ ವರ್ಷ ಮೇ ವರೆಗೆ 31 ಮಂದಿ ಸಾವು
ಸಿದ್ದರಾಮಯ್ಯ ಬಡವರ ಪರ ಕಾಳಜಿ ಉಳ್ಳವರಾಗಿದ್ದಾರೆ. ಸಜ್ಜನ, ಪ್ರಾಮಾಣಿಕ ವ್ಯಕ್ತಿಯೆಂದು ಹೆಸರು ಪಡೆದಿರುವ ಸಂಸತ್ತಿನಲ್ಲಿ ಬಳ್ಳಾರಿ ಜನರ ಧ್ವನಿಯಾಗಬಲ್ಲ ಈ. ತುಕಾರಾಂ ಅವರಿಗೆ ಮತ ನೀಡಿ ಎಂದರು. ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್. ಭೀಮನಾಯ್ಕ ಮಾತನಾಡಿ, ಕೇಂದ್ರದ ಬಿಜೆಪಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಕೋಮು ಸೌಹಾರ್ದ ಹಾಳು ಮಾಡಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು ಎಂದರು.