ಕಾಂಗ್ರೆಸ್‌ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಡಿ.ಕೆ.ಶಿವಕುಮಾರ್‌

Published : May 21, 2025, 06:42 AM IST
ಕಾಂಗ್ರೆಸ್‌ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಡಿ.ಕೆ.ಶಿವಕುಮಾರ್‌

ಸಾರಾಂಶ

ಕಾಂಗ್ರೆಸ್‌ ಸರ್ಕಾರ ಜನಪರ ಕೆಲಸ ಮಾಡಿಕೊಂಡು ಬಂದಿದೆ. ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಜಾರಿಗೊಳಿಸಿದೆ. ಕಾಂಗ್ರೆಸ್‌ ಇರೋವರೆಗೂ ಈ ಗ್ಯಾರಂಟಿ ನಿಲ್ಲಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ. 

ಹೊಸಪೇಟೆ (ಮೇ.21): ಕಾಂಗ್ರೆಸ್‌ ಸರ್ಕಾರ ಜನಪರ ಕೆಲಸ ಮಾಡಿಕೊಂಡು ಬಂದಿದೆ. ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಜಾರಿಗೊಳಿಸಿದೆ. ಕಾಂಗ್ರೆಸ್‌ ಇರೋವರೆಗೂ ಈ ಗ್ಯಾರಂಟಿ ನಿಲ್ಲಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ. ನಗರದಲ್ಲಿ ನಡೆದ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಮುಂದೆಯೂ ಜನ ಕಲ್ಯಾಣಕ್ಕಾಗಿ ಶ್ರಮಿಸಲಿದೆ ಎಂದರು. ಈಗ ಕಂದಾಯ ಇಲಾಖೆಯಿಂದ 6ನೇ ಗ್ಯಾರಂಟಿಯಾಗಿ ‘ಭೂ ಗ್ಯಾರಂಟಿ’ ಯೋಜನೆ ಜಾರಿಗೊಂಡಿದೆ. ವಿರೋಧ ಪಕ್ಷಗಳು ಎಷ್ಟೇ ಟೀಕಿಸಿದರೂ ಸರಿ, ನಾವು ಜನಸೇವಾ ಕಾರ್ಯವನ್ನು ಮುಂದುವರಿಸುತ್ತೇವೆ. ಟೀಕೆಗಳು ಅಳಿಯುತ್ತವೆ. ಆದರೆ, ಕೆಲಸಗಳು ಉಳಿಯುತ್ತವೆ ಎಂಬ ತತ್ವದಲ್ಲಿ ನಮಗೆ ನಂಬಿಕೆಯಿದೆ ಎಂದರು.

ಹೊಸ ವಿದ್ಯುತ್‌ ಸಂಪರ್ಕ ಸಮಸ್ಯೆಗೆ ಶಾಶ್ವತ ಪರಿಹಾರ: ಹೊಸ ವಿದ್ಯುತ್‌ ಸಂಪರ್ಕ ಪಡೆಯಲು ಗ್ರಾಹಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖಾ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ಒದಗಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದರು.

ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ರಮೇಶ್‌ ನೇತೃತ್ವದ ನಿಯೋಗವು ನಗರದ ಕುಮಾರ ಕೃಪ ವಸತಿಗೃಹದಲ್ಲಿ ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಹೊಸ ವಿದ್ಯುತ್‌ ಸಂಪರ್ಕ ಪಡೆಯಲು ಗ್ರಾಹಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದರು. 2025ರ ಏಪ್ರಿಲ್‌ 4ರ ಹಿಂದೆ ವಿದ್ಯುತ್ ಸಂಪರ್ಕಕ್ಕಾಗಿ ಸಲ್ಲಿಸಿರುವ ಸಾಕಷ್ಟು ಅರ್ಜಿಗಳು ಬಾಕಿ ಇದ್ದ ಅವುಗಳ ವಿಲೇವಾರಿಗೆ ಕ್ರಮ ವಹಿಸಲು ಮನವಿ ಮಾಡಿದರು. 

2 ವರ್ಷದಲ್ಲಿ 142 ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌ ಅವರು, ಇಂಧನ ಇಲಾಖೆ ಸಚಿವರು, ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದು ಆದಷ್ಟು ಬೇಗ ಎಲ್ಲ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದರು. ಈ ವೇಳೆ ಬೆಂಗಳೂರು ನಗರ ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಉಪಸ್ಥಿತರಿದ್ದರು. ನಿಯೋಗದಲ್ಲಿ ಸಂಘದ ಉಪಾಧ್ಯಕ್ಷ ಉಮೇಶ್, ರಾಜ್ಯ ಕಾರ್ಯದರ್ಶಿ ಚಂದ್ರಬಾಬು ಎಚ್.ವಿ, ಬೆಂಗಳೂರು ವಿಭಾಗದ ಅಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಯದುಕುಮಾರ್, ಖಜಾಂಜಿ ಚಂದ್ರಬಾಬು ಶಾಂತ ಕುಮಾರ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!