
ಬೆಂಗಳೂರು (ಮಾ.31): ನಾನು ಬೇಕೆಂದೇ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಆಗಿದ್ದರಿಂದ ಜೆಡಿಎಸ್ ತೊರೆದೆ. ಸಿದ್ದರಾಮಯ್ಯನವರನ್ನು ಪಕ್ಷದಿಂದ ಹೊರಹಾಕಿದಂತೆ ನನ್ನನ್ನೂ ಹಾಕಿದರು ಎಂದು ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್ ಆರೋಪಿಸಿದರು. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಾಟಕ, ವಂಚನೆ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿಲ್ಲ. ಒಕ್ಕಲಿಗರ ಸಂಘದ ಚುನಾವಣೆ ವೇಳೆ ಗೊಂದಲ ಉಂಟಾಗಿತ್ತು. ಅದೇ ದ್ವೇಷದ ಮೇಲೆ ನನ್ನನ್ನು ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಹೊರ ಹಾಕುವಂತೆ ಹಾಕಿದರು ಎಂದು ಸ್ಪಷ್ಟಪಡಿಸಿದರು.
ನಾನು ಮೂಲತಃ ಕಾಂಗ್ರೆಸ್ ಸದಸ್ಯ. ನಮ್ಮ ತಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ನೇತೃತ್ವದಲ್ಲಿ ನಾನು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದೆ. ಆದರೆ 2004 ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ. ಪಕ್ಷೇತರವಾಗಿ ಸ್ಪರ್ಧಿಸಿ ಜಯಗಳಿಸಿದೆ. 2008 ರಲ್ಲಿ ಜೆಡಿಎಸ್ ಟಿಕೆಟ್ ನೀಡಿದರು, ಜಯಗಳಿಸಿದೆ. 2021 ರಲ್ಲಿ ಕುಮಾರಸ್ವಾಮಿ ಅವರು ನನಗೆ ತಿಳಿಸದೇ ಕಾರ್ಯಕ್ರಮ ಮಾಡಿ ಬೇರೆ ವ್ಯಕ್ತಿಯನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದರು ಎಂದು ವಿವರಿಸಿದರು.
ಮೀಸಲಾತಿ ವಿಚಾರದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ತಂತ್ರಗಾರಿಕೆ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಕ್ಕಲಿಗ ಪ್ರಾಬಲ್ಯದ ಹಳೆ ಮೈಸೂರು ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ, ಒಕ್ಕಲಿಗ ಮತದಾರರನ್ನು ಸೆಳೆಯುವುದು ಹಾಗೂ ಒಕ್ಕಲಿಗರ ಸಮಾವೇಶ ನಡೆಸುವ ಕುರಿತು ಕಾಂಗ್ರೆಸ್‌ನ ಒಕ್ಕಲಿಗ ನಾಯಕರು ಮಹತ್ವದ ಸಭೆ ನಡೆಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಎನ್. ಚೆಲುವರಾಯಸ್ವಾಮಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ನಾಯಕರು ಹಾಗೂ ಇಬ್ಬರು ಜೆಡಿಎಸ್ ಶಾಸಕರೂ (ಪಕ್ಷದಿಂದ ಉಚ್ಚಾಟಿತ) ಭಾಗವಹಿಸಿದ್ದರು.
ಒಕ್ಕಲಿಗರ ಮೀಸಲಾತಿ ಹೆಚ್ಚಳದ ಬೇಡಿಕೆ ಬಗ್ಗೆ ಯಾವ ರೀತಿಯಲ್ಲಿ ಸ್ಪಂದಿಸಬೇಕು. ಜೆಡಿಎಸ್‌ನ ಸಾಂಪ್ರದಾಯಿಕ ಮತಗಳಂತಾಗಿರುವ ಒಕ್ಕಲಿಗ ಮತಗಳನ್ನು ಈ ಬಾರಿಯ ಚುನಾವಣೆಯಲ್ಲಿ ಹೇಗೆ ಸೆಳೆಯಬೇಕು. ಒಕ್ಕಲಿಗ ಪ್ರಾಬಲ್ಯವಿರುವ ಮಂಡ್ಯ, ಹಾಸನದಂತಹ ಜಿಲ್ಲೆಗಳಲ್ಲಿ ಯಾವ ರೀತಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ಮಾಡಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ಇದೇ ವೇಳೆ ಕಾಂಗ್ರೆಸ್‌ನ ಒಕ್ಕಲಿಗರ ಸಮಾವೇಶ ನಡೆಸುವ ಮೂಲಕ ಒಕ್ಕಲಿಗರ ಸಂಘಟಿಸುವ ಕುರಿತೂ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲತಾಣದ ಹಿಂದಿನ ಶಕ್ತಿಯೇ ಸ್ತ್ರೀ: ಸಂಸದ ತೇಜಸ್ವಿ ಸೂರ್ಯ
ಸಭೆ ಆರಂಭಕ್ಕೂ ಮೊದಲು ಮಾತನಾಡಿದ ಚೆಲುವರಾಯಸ್ವಾಮಿ, ಚುನಾವಣೆ ಹತ್ತಿರ ಬರುತ್ತಿದ್ದು ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಸಮುದಾಯದ ಮತಗಳನ್ನು ಸೆಳೆಯಬೇಕಿದೆ. ಈ ನಿಟ್ಟಿನಲ್ಲಿ ರಾಜಕೀಯವಾಗಿ ಯಾವ ನಡೆ ಅನುಸರಿಸಬೇಕು ಎಂಬ ಬಗ್ಗೆ ಚರ್ಚೆಯಾಗಲಿದೆ. ಸಹಜವಾಗಿ ಒಕ್ಕಲಿಗ ಮೀಸಲಾತಿ ಬಗ್ಗೆಯೂ ಚರ್ಚೆಯಾಗಲಿದೆ. ಕೆಲವು ಕಡೆ ಜಾತಿ ಆಧಾರಿತವಾಗಿಯೇ ಟಿಕೆಟ್ ನೀಡಬೇಕಾಗುತ್ತದೆ. ಆದರೆ, ಗೆಲುವು ಮುಖ್ಯ. ಕಳೆದ ಬಾರಿ ಮಂಡ್ಯ ಜಿಲ್ಲೆಯಲ್ಲಿ 7 ಸ್ಥಾನ ಕಳೆದುಕೊಂಡಿದ್ದೆವು. ಬಳಿಕ ಮಂಡ್ಯ ರಾಜಕಾರಣ ಬದಲಾಗಿದೆ. ಇದರ ಸದುಪಯೋಗ ಹೇಗೆ ಪಡೆಯಬೇಕು ಎಂಬ ಬಗ್ಗೆ ಚರ್ಚಿಸುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.