
ಅಹಮದಾಬಾದ್, (ಅ.29): ಗುಜರಾತಿನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯ್ ಪಟೇಲ್ (92) ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ.
ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಗುರುವಾರ ಬೆಳಗ್ಗೆಯಷ್ಟೇ ಮನೆಯವರ ಬಳಿ ಹೇಳಿಕೊಂಡಿದ್ದರು. ಬಳಿಕ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಇಂದು (ಗುರುವಾರ) ಕೊನೆಯುಸೆರೆಳೆದಿದ್ದಾರೆ.
ಕೊರೋನಾ ಸೋಂಕಿನಿಂದ ಮತ್ತೋರ್ವ ಬಿಜೆಪಿ ನಾಯಕ ನಿಧನ: ಮೋದಿ ಸಂತಾಪ
ಕೇಶುಭಾಯ್ ಪಟೇಲ್ ಅವರಿಗೆ ಸೆಪ್ಟೆಂಬರ್ನಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತ. ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೇಶುಭಾಯ್ ಪಟೇಲರು ಎರಡು ಅವಧಿಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಕೇಶುಭಾಯ್ ಪಟೇಲರನ್ನು ಕಳೆದುಕೊಂಡ ಬಿಜೆಪಿಗೆ ದೊಡ್ಡ ನಷ್ಟವಾಗಿದೆ.
ಮೊನ್ನೇ ಅಷ್ಟೇ ಗುಜರಾತಿ ಖ್ಯಾತ ನಟ ಹಾಗೂ ಬಿಜೆಪಿ ನಾಯಕ ನರೇಶ್ ಕನೋಡಿಯಾ(77) ಅವರು ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.