ಜಗದೀಶ್ ಶೆಟ್ಟರ್ ಅವರ ಕುಟುಂಬ ಹುಬ್ಬಳ್ಳಿಯ ಮೂರು ಸಾವಿರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಆಶೀರ್ವಾದ ಮಾಡಲು ಬಂದಿದ್ದೇನೆ. ಜಗದೀಶ್ ಶೆಟ್ಟರ್ ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ ಎಂದ ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ
ಬೆಳಗಾವಿ(ಮೇ.04): ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದ್ದಾರೆ.
ಇಂದು(ಶನಿವಾರ) ಬೆಳಗಾವಿ ಸಂಸದೆ ಮಂಗಲಾ ಅಂಗಡಿ ನಿವಾಸಕ್ಕೆ ಆಗಮಿಸಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ತಮ್ಮ ಗ್ಯಾರಂಟಿಗಿಂತ, ಪೆನ್‌ಡ್ರೈವ್ ಮೇಲಿನ ವಿಶ್ವಾಸವೇ ಹೆಚ್ಚಾಗಿದೆ: ಬಿ.ವೈ. ವಿಜಯೇಂದ್ರ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಅವರು, ಜಗದೀಶ್ ಶೆಟ್ಟರ್ ಅವರ ಕುಟುಂಬ ಹುಬ್ಬಳ್ಳಿಯ ಮೂರು ಸಾವಿರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಆಶೀರ್ವಾದ ಮಾಡಲು ಬಂದಿದ್ದೇನೆ. ಜಗದೀಶ್ ಶೆಟ್ಟರ್ ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ ಎಂದರು.