''ಮತ್ತೆ ಮೊಳಗಲಿದೆ ಜೆಡಿಎಸ್ ಕಹಳೆ: ಎಚ್ಡಿಕೆ 2028ಕ್ಕೆ ಸಿಎಂ''

Kannadaprabha News   | Kannada Prabha
Published : Feb 26, 2026, 11:57 AM IST
nikhil kumaraswamy

ಸಾರಾಂಶ

2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೈತ್ರಿಕೂಟದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬನ್ನೂರು : 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೈತ್ರಿಕೂಟದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನತಾದಳ-ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮ

ಮೈಸೂರು ಜಿಲ್ಲೆ ಬನ್ನೂರಿನಲ್ಲಿ ಜನರೊಂದಿಗೆ ಜನತಾದಳ-ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬನ್ನೂರು, ದೇವೇಗೌಡರ ಕಾಲದಿಂದಲೂ ಜೆಡಿಎಸ್ ಅನ್ನು ಕೈ ಹಿಡಿದ ಸ್ಥಳ. ಹಿಂದಿನ ಚುನಾವಣೆಯಲ್ಲಿ ಬಲಿಷ್ಟ ನಾಯಕನನ್ನು ಸೋಲಿಸಿ ಜೆಡಿಎಸ್ ಬಾವುಟವನ್ನು ಮೊದಲ ಬಾರಿಗೆ ಹಾರಿಸಿದ ಕೀರ್ತಿ ನೀಡಿದ ಭಾಗವಾಗಿದ್ದು, ಈ ಭಾಗದಿಂದಲೇ ಜೆಡಿಎಸ್ ಕಹಳೆ ಮೊಳಗಲಿದೆ ಎಂದರು.

ರಾಜ್ಯದ ರೈತರ ಸಾವಿರಾರು ಕೋಟಿ ರು.ಗಳನ್ನು ಮನ್ನಾ ಮಾಡಿದ್ದರು

ಈ ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ರೈತರ ಸಾವಿರಾರು ಕೋಟಿ ರು.ಗಳನ್ನು ಮನ್ನಾ ಮಾಡಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ 4 ಲಕ್ಷ ರು. ಸಾಲವನ್ನು ರಾಜ್ಯದ ಜನತೆ ಮೇಲೆ ಹೊರಿಸಿದೆ ಎಂದು ಕಾಂಗ್ರೆಸ್‌ ಸರ್ಕಾರವನ್ನು ದೂಷಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ಇಲ್ಲ : ಸಿಎಂ
ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜತೆಗೆ ಮೈತ್ರಿಗೆ ರೆಡಿ: ದೇವೇಗೌಡ