H Vishwanath ಚುನಾವಣಾ ರಾಜಕಾರಣಕ್ಕೆ ಎಚ್‌.ವಿಶ್ವನಾಥ್ ಗುಡ್‌ ಬೈ!

Kannadaprabha News   | Kannada Prabha
Published : May 08, 2026, 06:53 AM IST
H Vishwanath retires from electoral politics rules out future contests for himself and his sons

ಸಾರಾಂಶ

ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರು ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕನಿಷ್ಠ ₹50 ಕೋಟಿ ಬೇಕಾಗಿದ್ದು, ಅಷ್ಟು ಹಣ ತಮ್ಮ ಬಳಿ ಇಲ್ಲದಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. 

ಮೈಸೂರು: ‘ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಘೋಷಿಸಿದ್ದಾರೆ. 

ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಈ ಹಿಂದೆ ಚುನಾವಣೆಗಳಲ್ಲಿ ಸ್ಪರ್ಧಿಸಿದಾಗ ಜನರೇ ಖರ್ಚಿಗೆ ಹಣ ನೀಡಿ ಆಶೀರ್ವದಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು. ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲಿ ತೊಡಗಿದವರು ತಮ್ಮ ಜಮೀನು, ಮನೆ ಮಾರಿ ಸ್ಪರ್ಧಿಸಬಹುದು. ಆದರೆ, ನಮ್ಮಿಂದ ಅದು ಸಾಧ್ಯವಿಲ್ಲ ಎಂದರು.

ನನ್ನ ಬಳಿ ಒಂದು ಮನೆ, ಒಂದು ನಿವೇಶನ ಮಾತ್ರ ಇದೆ

ನನ್ನ ಬಳಿ ಒಂದು ಮನೆ ಮತ್ತು ಒಂದು ನಿವೇಶನ ಮಾತ್ರ ಇದೆ. ಹೀಗಿರುವಾಗ ಸ್ಪರ್ಧೆ ಹೇಗೆ ಸಾಧ್ಯ?. ಅಲ್ಲದೇ, ನನ್ನ ಮಕ್ಕಳು ಕೂಡ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ತಮ್ಮ ಶಕ್ತ್ಯಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದರು.

- ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನಲ್ಲಿಲ್ಲ: ಎಂಎಲ್‌ಸಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದ ಬಂಡವಾಳ ಗುಜರಾತ್‌ಗೆ, ಐಪಿಎಲ್ ಮ್ಯಾಚ್‌ ಕೂಡ ಶಿಫ್ಟ್, ಇಲ್ಲೇನು ಭದ್ರತೆ ಇಲ್ವಾ? ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ತಮಿಳುನಾಡಲ್ಲಿ ಮಧ್ಯರಾತ್ರಿ ಬೆಳವಣಿಗೆ: ದಳಪತಿ ವಿಜಯ್​ಗೆ ಕೊಟ್ಟ Z+ ಭದ್ರತೆ, ಬೆಂಗಾವಲು ವಾಪಸ್​; ಆಗಿದ್ದೇನು?