ನೇಹಾ ಕೇಸ್‌ ಸಿಬಿಐಗೆ ಒಪ್ಪಿಸಿ, ರಾಜ್ಯ ಸರ್ಕಾರದಿಂದ ಪರಿಹಾರ ನೀಡಿ: ಕಟೀಲ್‌ ಆಗ್ರಹ

By Kannadaprabha News  |  First Published Apr 23, 2024, 5:23 AM IST

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಅಲ್ಲದೆ, ನೇಹಾ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಆಗ್ರಹಿಸಿದ್ದಾರೆ.
 


ಮಂಗಳೂರು (ಏ.23): ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಅಲ್ಲದೆ, ನೇಹಾ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಹಿಂದೂಗಳ ಮೇಲೆ ಹಲ್ಲೆ, ಹತ್ಯೆಗಳು ನಡೆಯುತ್ತಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗದಲ್ಲಿ ಹರ್ಷ ಹತ್ಯೆ, ಮಂಗಳೂರಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಯಿತು. 

ತಕ್ಷಣ ಅವರ ಮನೆಗೆ ತೆರಳಿ ಸಾಂತ್ವನ ಹೇಳುವ, ಪರಿಹಾರ ನೀಡುವ ಕೆಲಸ ಮಾಡಲಾಯಿತು. ಈಗ ಕಾಂಗ್ರೆಸ್‌ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆಯಾದರೂ ಕಾಂಗ್ರೆಸ್‌ ಸರ್ಕಾರ, ಮುಖಂಡರು ನೇಹಾ ಕುಟುಂಬಕ್ಕೆ ಇದುವರೆಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಪ್ರಕರಣದ ತನಿಖೆಯನ್ನು ಕಾಂಗ್ರೆಸ್‌ ಸರ್ಕಾರ ನಡೆಸುವ ವಿಶ್ವಾಸವಿಲ್ಲ. ಕೂಡಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

Tap to resize

Latest Videos

ಕಾಂಗ್ರೆಸ್‌ ಗೆದ್ದರೆ ನಿಮ್ಮ ಆಸ್ತಿ ಜಪ್ತಿ ಮಾಡಿ ಎಲ್ಲರಿಗೂ ಹಂಚುತ್ತೆ: ಪ್ರಧಾನಿ ಮೋದಿ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಮೆರವಣಿಗೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಯಿತು. ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೇಳಿ ಬಂತು. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಆದಾಗ ಡಿ.ಕೆ. ಶಿವಕುಮಾರ್‌ ಹಗುರ ಹೇಳಿಕೆ ನೀಡಿದ್ದರು. ಬಳಿಕ ಬಾಂಬ್‌ ಸ್ಫೋಟಕ್ಕೆ ಉಗ್ರವಾದಿಗಳ ಲಿಂಕ್‌ ಇರುವುದು ಬಯಲಾದಾಗ ದಾರಿ ತಪ್ಪಿಸುವ ಮಾತನಾಡಿದ್ದರು. ಕಾಂಗ್ರೆಸ್‌ನ ತುಷ್ಟೀಕರಣ ನೀತಿಯೇ ಇಂತಹ ಘಟನೆಗಳಿಗೆ ಕಾರಣ ಎಂದು ನಳಿನ್‌ ಕುಮಾರ್‌ ಹೇಳಿದರು.

ಬಿಜೆಪಿ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿತ್ತು. ಇದೀಗ ಪಿಎಫ್‌ಐನ ನಂಟಿರುವ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿದೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಸಂಪತ್ತಿನ ಸಮಾನ ಹಂಚಿಕೆಯನ್ನು ಪ್ರಸ್ತಾಪಿಸಲಾಗಿದೆ. ಇದು ಮುಸ್ಲಿಮರ ತುಷ್ಟೀಕರಣ ನೀತಿ. ರಾಜ್ಯದಲ್ಲಿ ಬಹುಸಂಖ್ಯಾತ ಹಿಂದುಗಳಿಗೆ ಬದುಕು ಕಷ್ಟವಾಗಿದೆ ಎಂದರು.

Lok Sabha Elections 2024: ಬೆಂಗಳೂರಿಗೆ ಇಂದು ಅಮಿತ್‌ ಶಾ: ತೇಜಸ್ವಿ ಪರ ರೋಡ್‌ ಶೋ

ದ.ಕ.ಕ್ಕೆ 1.13 ಲಕ್ಷ ಕೋಟಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಗೆ 1.13 ಲಕ್ಷ ಕೋಟಿ ರು.ಅನುದಾನ ನೀಡಿದೆ. ಕಳೆದ 33 ವರ್ಷಗಳಿಂದ ದ.ಕ. ಕ್ಷೇತ್ರವನ್ನು ಬಿಜೆಪಿ ಸಂಸದರು ಪ್ರತಿನಿಧಿಸುತ್ತಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ ಎಂದು ನಳಿನ್‌ ಕುಮಾರ್‌ ತಿಳಿಸಿದರು.

click me!