ಕನ್ನಡಿಗರ ಹಿತರಕ್ಷಣೆಗೆ ಕೈಗಳು ಸದಾ ಒಂದು: ಸಿದ್ದು, ಡಿಕೆಶಿ

Published : May 19, 2023, 04:27 AM IST
ಕನ್ನಡಿಗರ ಹಿತರಕ್ಷಣೆಗೆ ಕೈಗಳು ಸದಾ ಒಂದು: ಸಿದ್ದು, ಡಿಕೆಶಿ

ಸಾರಾಂಶ

‘ಕರ್ನಾಟಕದ ಸುರಕ್ಷಿತ ಭವಿಷ್ಯ ಮತ್ತು ಕನ್ನಡಿಗರ ಶ್ರೇಯೋಭಿವೃದ್ಧಿ ನಮ್ಮ ಪ್ರಮುಖ ಆದ್ಯತೆ. ಅದನ್ನು ಖಾತರಿಪಡಿಸುವ ಸಲುವಾಗಿ ನಾವು ಒಗ್ಗಟ್ಟಾಗಿದ್ದೇವೆ. ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ’ ಎಂದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್‌ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. 

ಬೆಂಗಳೂರು (ಮೇ.19): ‘ಕರ್ನಾಟಕದ ಸುರಕ್ಷಿತ ಭವಿಷ್ಯ ಮತ್ತು ಕನ್ನಡಿಗರ ಶ್ರೇಯೋಭಿವೃದ್ಧಿ ನಮ್ಮ ಪ್ರಮುಖ ಆದ್ಯತೆ. ಅದನ್ನು ಖಾತರಿಪಡಿಸುವ ಸಲುವಾಗಿ ನಾವು ಒಗ್ಗಟ್ಟಾಗಿದ್ದೇವೆ. ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ’ ಎಂದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್‌ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. ದೆಹಲಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಖಚಿತವಾದ ಬೆನ್ನಲ್ಲೇ ಇಬ್ಬರೂ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಇರುವ ಫೋಟೋ ಜತೆ ಟ್ವೀಟ್‌ ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರು, ಕರ್ನಾಟಕದ ಸುರಕ್ಷಿತ ಭವಿಷ್ಯ ಮತ್ತು ಕನ್ನಡಿಗರ ಶ್ರೇಯೋಭಿವೃದ್ದಿ ನಮ್ಮ ಪ್ರಮುಖ ಆದ್ಯತೆ. ಅದನ್ನು ಖಾತರಿಪಡಿಸುವ ಸಲುವಾಗಿ ನಾವು ಒಗ್ಗಟ್ಟಾಗಿದ್ದೇವೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಲು ಕಾಂಗ್ರೆಸ್‌ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಕಳಂಕ ತರುವವರ ಮೇಲೆ ಹದ್ದಿನ ಕಣ್ಣು: ಬಾಲಚಂದ್ರ ಜಾರಕಿಹೊಳಿ ಎಚ್ಚರಿಕೆ

ರಹಸ್ಯ ಒಪ್ಪಂದ ಬಹಿರಂಗಪಡಿಸಲ್ಲ: ಸೋನಿಯಾ ಗಾಂಧಿ ಅವರೊಂದಿಗೆ ಆಗಿರುವ ರಹಸ್ಯ ಒಪ್ಪಂದವನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸುವುದಿಲ್ಲ. ಸಮಯ ಬಂದಾಗ ಕಾಂಗ್ರೆಸ್‌ ಅಧ್ಯಕ್ಷರೇ ಬಹಿರಂಗಪಡಿಸುತ್ತಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು ಆಡಳಿತ ಹಂಚಿಕೆ ಕುರಿತ ಪ್ರಶ್ನೆಗೆ, ಒಪ್ಪಂದಗಳನ್ನು ಬಹಿರಂಗಪಡಿಸಿದರೆ ಆಡಳಿತಕ್ಕೆ ತೊಂದರೆ ಆಗುತ್ತದೆ. ಹೀಗಾಗಿ ನಾನು ಯಾವುದನ್ನೂ ಮಾತನಾಡುವುದಿಲ್ಲ. 

ಶೇರಿಂಗ್‌ ಅಂಡ್‌ ಕೇರಿಂಗ್‌ (ಹಂಚಿಕೊಳ್ಳುವುದು ಮತ್ತು ಕಾಳಜಿ ವಹಿಸುವುದು) ಪ್ರತಿಯೊಬ್ಬರಲ್ಲೂ ಮುಖ್ಯ ಎಂದು ಪರೋಕ್ಷವಾಗಿ ಅಧಿಕಾರ ಹಂಚಿಕೆ ಸುಳಿವು ನೀಡಿದರು. ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಹೋರಾಟ ಇಲ್ಲ. ಜನ ನಮ್ಮಿಬ್ಬರನ್ನು ಗಮನಿಸುತ್ತಿದ್ದಾರೆ ಎಂಬುದು ಮುಖ್ಯ. ನಮ್ಮ ಪಕ್ಷದ ಗ್ಯಾರಂಟಿಗಳ ಈಡೇರಿಕೆಯೇ ನಮ್ಮ ಆದ್ಯತೆ ಎಂದರು.

ನಿಯೋಜಿತ ಸಿಎಂ, ಡಿಸಿಎಂ ಮನೆಗೆ ಭದ್ರತೆ: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನಿವಾಸಗಳಿಗೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್‌್ತ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅಧಿಕೃತ ಘೋಷಣೆಯಾದ ಬೆನ್ನಲ್ಲೇ ಗಾಂಧಿ ಭವನ ರಸ್ತೆಯಲ್ಲಿರುವ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಮತ್ತು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಸೋಲಿನ ಹೊಣೆ ನಾನೇ ಹೊರುತ್ತೇನೆಂದ ಮಾಜಿ ಶಾಸಕ ಕೆ.ಜಿ.ಬೋಪಯ್ಯ

ತಮ್ಮ ನಾಯಕರುಗಳಿಗೆ ಶುಭ ಕೋರಲು ಅಸಂಖ್ಯಾತ ಸಂಖ್ಯೆಯಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಹಾಗೂ ಉಭಯ ನೇತಾರರ ಅಭಿಮಾನಿಗಳು ಜಮಾವಣೆಗೊಂಡರು. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ ಪೊಲೀಸರು, ನಿಯೋಜಿತ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಮನೆಗಳ ಮುಂದೆ ಬ್ಯಾರಿಕೇಡ್‌ಗಳನ್ನು ಹಾಕಿ ಜನರನ್ನು ನಿಯಂತ್ರಿಸಿದರು. ತಲಾ ಎರಡು ಕೆಎಸ್‌ಆರ್‌ಪಿ ವಾಹನಗಳನ್ನು ಬಂದೋಬಸ್‌ಗ್ತೆ ನಿಯುಕ್ತಿಗೊಳಿಸಲಾಗಿದ್ದು, ಇಬ್ಬರ ಮನೆಗಳ ಬಳಿ 50ಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ಅಧಿಕಾರಿಗಳು ನಿಯೋಜಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!