
ಮೈಸೂರು (ಅ.24): ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿರುವುದು ಸಂತೋಷದ ವಿಚಾರ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ಸುದ್ದಿಗಾರರೊಡನೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲು ನಮ್ಮ ಪಕ್ಷದಲ್ಲೂ ಬಹಳಷ್ಟು ಅಭ್ಯರ್ಥಿಗಳಿದ್ದರು. ಆದರೂ ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ನಾವು ಟಿಕೆಟ್ ಕೊಟ್ಟಿದ್ದೇವೆ ಎಂದರೇ ಪಕ್ಷದ ಉದಾರತ ಎಂತಹದ್ದು ಎಂಬುದನ್ನು ಗಮನಿಸಿ ಎಂದರು. ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮುಡಾ ಕಾರ್ಯ ಪುನಾರಂಭಕ್ಕೆ ಉಸ್ತುವಾರಿ ಸಚಿವರ ಸೂಚನೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲವು ಕಾರ್ಯಗಳು ಮುಡಾದಲ್ಲಿ ಸ್ಥಗಿತಗೊಂಡಿವೆ. ಅವುಗಳನ್ನು ಪುನಾರಂಭಿಸಲು ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗೆ ಹೇಳಿದ್ದೇನೆ ಎಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮುಗಿರುವುದರಿಂದ ಇನ್ನೂ ಆಡಳಿತ ಕಾರ್ಯಗಳು ಚುರುಕುಗೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದೇನೆ ಎಂದರು.
ಈ ಒಂದೇ ಒಂದು ಕಾರಣದಿಂದ ಪ್ರಭಾಸ್-ಸಮಂತಾ ಜೋಡಿಯಾಗಿ ಸಿನಿಮಾದಲ್ಲಿ ನಟಿಸಲಿಲ್ಲ!
ಎಂಡಿಎ ಸಭೆಯನ್ನು ಕಚೇರಿಯಲ್ಲಿ ನಡೆಸದೆ ಜಲದರ್ಶಿನಿಯಲ್ಲಿ ಎಂಡಿಎ ಅಧ್ಯಕ್ಷ ಜಿ. ಲಕ್ಷ್ಮೀಕಾಂತರೆಡ್ಡಿ ಜತೆಗೂಡಿ ಸಭೆ ನಡೆಸಿದರು. ಅಧ್ಯಕ್ಷರಾಗಿದ್ದ ಕೆ. ಮರೀಗೌಡರ ರಾಜೀನಾಮೆ, ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ನಡೆದ ಮೊದಲ ಸಭೆ ಇದಾಗಿತ್ತು. ಸಭೆಯಲ್ಲಿ ಎಂಡಿಎ ಆಯುಕ್ತ ರಘುನಂದನ್ ಹಾಗೂ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ವರುಣ ಕ್ಷೇತ್ರ ಹಾಗೂ ರಾಜ್ಯದ ಜನತೆ ಅವರೊಂದಿಗೆ ನಿಲ್ಲಬೇಕು ಎಂದು ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಎನ್.ಎಸ್,. ಬೋಸರಾಜು ಹಾಗೂ ರಹೀಂ ಖಾನ್ ಮನವಿ ಮಾಡಿದರು. ವರುಣ ಕ್ಷೇತ್ರದ ತಾಯೂರು ಗೇಟ್ ಬಳಿ ಮಂಗಳವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ನಿರ್ದೇಶಕ ಸಿಂಪಲ್ ಸುನಿ 'ದೇವರು ರುಜು ಮಾಡಿದನು' ಚಿತ್ರದಲ್ಲಿ ಕೀರ್ತಿ ಕೃಷ್ಣ, ದಿವಿತಾ ರೈ
ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರ ಒಂದೇ ಒಂದು ಮನೆಯನ್ನು ವಿತರಿಸಿಲ್ಲ. ಬಡವರಿಗಾಗಿ ತೆರೆದಿದ್ದ ಇಂದಿರಾ ಕ್ಯಾಂಟಿನ್ಗಳನ್ನು ಬಂದ್ ಮಾಡಿದ್ದರು. ಆದರೆ ಸಿದ್ದರಾಮಯ್ಯ ಅವರು ಹೊಸದಾಗಿ ಇಂದಿರಾ ಕ್ಯಾಂಟಿನ್ಗಳನ್ನು ತೆರೆಯುತ್ತಿದ್ದಾರೆ. ಅಲ್ಲದೇ ಹಳೆಯವನ್ನು ಪುನಾರಂಭಿಸಿದ್ದಾರೆ. ನಾನು ನಾಲ್ಕು ಬಾರಿ ಬೀದರ್ನಿಂದ ಗೆಲ್ಲಲು, ಈಗ ಮಂತ್ರಿಯಾಗಲು ಸಿದ್ದರಾಮಯ್ಯ ಅವರೇ ಕಾರಣ. ಹೀಗಾಗಿ ಇಂತಹ ನಾಯಕರಿಗೆ ಬೆಂಬಲ ನೀಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.