
ಹಾಸನ(ಮಾ.29): ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿರುವ ಹಾಲಿ ಸಂಸದ ಪ್ರಜ್ವಲ್ ರೇವಣ್ಣ, 40.94 ಕೋಟಿ ರು.ಮೌಲ್ಯದ ಆಸ್ತಿ ಹೊಂದಿದ್ದಾರೆ. ಆ ಪೈಕಿ 5.44 ಕೋಟಿ ಚರಾಸ್ತಿ, 35.40 ಕೋಟಿ ಸ್ಥಿರಾಸ್ತಿ.
ಕೃಷಿಯಿಂದ ಕಳೆದ 5 ವರ್ಷಗಳಲ್ಲಿ 2.75 ಕೋಟಿ ರು.ಸಂಪಾದಿಸಿದ್ದಾಗಿ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. 31 ಹಸು, ನಾಲ್ಕು ಎತ್ತು, ಒಂದು ಟ್ರ್ಯಾಕ್ಟರ್ ಹೊಂದಿದ್ದಾರೆ. ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ ಹಾಗೂ ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯರಿಂದ 22 ಲಕ್ಷ ರು., ಅತ್ತೆ ಶೈಲಜಾರಿಂದ 10 ಲಕ್ಷ ರು.,ಅಜ್ಜಿ ಚನ್ನಮ್ಮರಿಂದ 23 ಲಕ್ಷ ರು. ಕುಪೇಂದ್ರ ರೆಡ್ಡಿಯಿಂದ 1 ಲಕ್ಷ ರು., ತಂದೆ ರೇವಣ್ಣರಿಂದ 86 ಲಕ್ಷ, ಸಹೋದರ ಡಾ.ಸೂರಜ್ ರೇವಣ್ಣ ಅವರಿಂದ 1 ಕೋಟಿ ರು. ಸಾಲ ಸೇರಿ ಒಟ್ಟು 4.48 ಕೋಟಿ ರು.ಸಾಲ ಹೊಂದಿದ್ದಾಗಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಮಾಡಿದ ಡಿಕೆ ಸುರೇಶ್, ಕಳೆದ ಐದು ವರ್ಷದಲ್ಲಿ ಡಿಕೆ ಸುರೇಶ್ ಆಸ್ತಿ ಶೇ. 75ರಷ್ಟು ಏರಿಕೆ!
ಸರ್ಕಾರಕ್ಕೆ 3.04 ಕೋಟಿ ರು.ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿದ್ದಾರೆ. 67 ಲಕ್ಷ ರು.ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನ, 17.48 ಲಕ್ಷ ರು. ಮೌಲ್ಯದ 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ರು. ಮೌಲ್ಯದ ವಜ್ರದ ಆಭರಣ ಹೊಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.