
ಹಾಸನ, (ಆ.26): ಜಿಲ್ಲೆಯ ಬೇಲೂರು ಕ್ಷೇತ್ರದ ಶಾಸಕ ಲಿಂಗೇಶ್‍ಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರ‍್ಯಾಂಡಮ್ ಟೆಸ್ಟ್ ವೇಳೆ ಶಾಸಕ ಲಿಂಗೇಶ್‍ಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ವಿಡಿಯೋ ಮಾಡಿರುವ ಶಾಸಕ ಲಿಂಗೇಶ್, ನನಗೆ ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಕಂಡು ಬಂದಿದೆ. ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಜೆಡಿಎಸ್ ಶಾಸಕಗೂ ತಟ್ಟಿದ ಕೊರೋನಾ : ಸಂಪರ್ಕಿತರಿಗೆ ಕ್ವಾರಂಟೈನ್
ಮಂಗಳವಾರವಷ್ಟೇ ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ತಮಗೆ ಕೊರೋನಾ ದೃಢಪಟ್ಟಿತ್ತು. ಇದೀಗ ಹಾಸನ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ಶೀಘ್ರವಾಗಿ ಗುಣಮುಖರಾಗಿ ಎಂದ ದೇವೇಗೌಡ್ರು
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಬೇಲೂರು ಶಾಸಕರು ಹಾಗೂ ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ಶ್ರೀ ಲಿಂಗೇಶ್ ಅವರಿಗೆ ಕೊರೊನಾ ಸೋಂಕು ದೃಢವಾಗಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.