Kodi Mutt Shri's Prediction: ಸಂಕ್ರಾಂತಿ ಬಳಿಕ ರಾಜಕೀಯ ವಿಫ್ಲವ; ರಾಜ್ಯಕ್ಕೂ ದೇಶಕ್ಕೂ ಕಂಟಕ: ಕೋಡಿಶ್ರೀ ಸ್ಫೋಟಕ ಭವಿಷ್ಯ!

Kannadaprabha News, Ravi Janekal |   | Kannada Prabha
Published : Jun 22, 2025, 04:21 PM IST
Kodi mutt

ಸಾರಾಂಶ

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ಬದಲಾವಣೆಗಳಾಗಲಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹಾರನಹಳ್ಳಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ದುಃಖ, ಯುದ್ಧ, ಮತ್ತು ಅರಸನಾಲಯಕ್ಕೆ ಕಾರ್ಮೋಡ ಕವಿಯುವ ಬಗ್ಗೆಯೂ ಎಚ್ಚರಿಸಿದ್ದಾರೆ.

ಅರಸೀಕೆರೆ (ಹಾಸನ) (ಜೂ.22): ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವವಾಗುವ ಲಕ್ಷಣ ಗೋಚರಿಸುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಫೋಟ, ಯುದ್ಧದ ಜತೆಗೆ ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದ್ದು, ಇದು ರಾಜ್ಯಕ್ಕೂ, ದೇಶಕ್ಕೂ ಕಾಡಲಿದೆ ಎಂದರು.

ಈ ಹಿಂದೆ ಎರಡ್ಮೂರು ಪ್ರಧಾನಮಂತ್ರಿಗಳು ಕೊಲೆ ಆಗ್ತಾರೆ ಅಂದಿದ್ದೆ. ಅದು ಈಗ ಆಗಿದೆ. ಸಾಗರದಲ್ಲಿ ಒಂದು ಜಲಸ್ಫೋಟ ಎಂದಿದ್ದೆ ಅದೂ ಆಗಲಿದೆ. ಯುದ್ಧ ನಿಲ್ಲೋದು ಸಂವತ್ಸರ ಪರ್ವದಲ್ಲಿ ಕಷ್ಟ. ದ್ವೇಷ, ಅಸೂಯೆಗಳ ಮಧ್ಯೆ ಒಂದಿಬ್ಬರು ಬಲಿಯಾಗುತ್ತಾರೆ. ಕೆಲ ದೇಶಗಳು ಮುಳುಗುತ್ತವೆ, ಕೆಲವು ಏಳುತ್ತವೆ. ಕೊರೋನಾ ಇನ್ನೊಂದು ರೂಪ ತಾಳಲಿದೆ. ಅಕಾಲದಲ್ಲಿ ಮಳೆ ಬಂದರೆ, ಸಕಾಲದಲ್ಲಿ ತೊಂದರೆ ಆಗಲಿದೆ. ಈ ಬಾರಿ ಮಳೆ ಚೆನ್ನಾಗಿ ಆಗಲಿದೆ. ಆದರೆ, ಜಲಸ್ಫೋಟದ ಜತೆಗೆ ವಾಯು, ಭೂ ಪ್ರಳಯವಾಗುತ್ತದೆ ಎಂದು ತಿಳಿಸಿದರು.

‘ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ’, ‘ಯುದ್ಧವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು’ ಎಂದು ನುಡಿದ ಶ್ರೀಗಳು, ಇದರರ್ಥ ಮುಂದೆ ಹೇಳುತ್ತೇನೆ ಎಂದು ಕುತೂಹಲ ಕಾಯ್ದಿಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು