ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ತಂತ್ರ, ಕುತಂತ್ರ‌ ನಡೆಯಲ್ಲ: ಬೊಮ್ಮಾಯಿ

By Govindaraj S  |  First Published Apr 12, 2024, 4:14 PM IST

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸಿಎಂ ಸಿದ್ದರಾಮಯ್ಯ ಅವರ‌ ಯಾವುದೇ ರೀತಿಯ ರಣತಂತ್ರ, ಕುತಂತ್ರ ಮಾಡಿದರೂ ನಡೆಯುವುದಿಲ್ಲ. ಅಲ್ಲಿ ಗೆಲ್ಲೊದು ಬಿಜೆಪಿ - ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿ ಎಂಬುದು ಈಗಾಗಲೇ ಸ್ಪಷ್ಟವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 


ರೋಣ (ಏ.12): ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸಿಎಂ ಸಿದ್ದರಾಮಯ್ಯ ಅವರ‌ ಯಾವುದೇ ರೀತಿಯ ರಣತಂತ್ರ, ಕುತಂತ್ರ ಮಾಡಿದರೂ ನಡೆಯುವುದಿಲ್ಲ. ಅಲ್ಲಿ ಗೆಲ್ಲೊದು ಬಿಜೆಪಿ - ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿ ಎಂಬುದು ಈಗಾಗಲೇ ಸ್ಪಷ್ಟವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ತಾಲೂಕಿನ ಚಿಕ್ಕಮಣ್ಣೂರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಕ್ಕಾಚಾರ ತೆಲೆಕೆಳಗಾಗಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನೆ ಸೋಲಿಸಲಾಗಲಿಲ್ಲ. 

ಈಗ ಬಿಜೆಪಿ- ಜೆಡಿಎಸ್ ಒಗ್ಗೂಡಿದ್ದು, ಕಾಂಗ್ರೆಸ್‌ಗೆ ಗೆಲುವು ಅಸಾಧ್ಯವಾಗಿದ್ದು, ಸಿದ್ದರಾಮಯ್ಯ ಅವರು ತೀವ್ರ ಮುಖಭಂಗ ಅನುಭವಿಸುವರು. ಕೆ. ಈಶ್ವರಪ್ಪ ಅವರ ಮುನಿಸನ್ನು ಶೀಘ್ರದಲ್ಲಿಯೇ ತಣಿಸಿ, ಅವರ ಮನವೊಲಿಸಲಾಗುವುದು. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಒಂದೇ ಒಂದು ಸೀಟು ಗೆಲ್ಲಲು ಆಗುವುದಿಲ್ಲ ಎಂದರು. ಈ ವೇಳೆ ಮಾಜಿ ಸಚಿವ ಕಳಕಪ್ಪ‌ ಬಂಡಿ, ಅಶೋಕ ನವಲಗುಂದ, ಬಿಜೆಪಿ ರೋಣ ಮಂಡಲ‌ ಅಧ್ಯಕ್ಷ ಮುತ್ತಣ್ಣ ಕಡಗದ, ಬಸವಂತಪ್ಪ‌ ತಳವಾರ, ಅನಿಲ ಪಲ್ಲೇದ, ಗ್ರಾಪಂ‌ ಮಾಜಿ ಉಪಾಧ್ಯಕ್ಷ ಶೇಖರಗೌಡ ಪಾಟೀಲ, ಎಂ.ಬಿ. ಸಜ್ಜನ, ಎಂ.ಬಿ. ಚೌಡರಡ್ಡಿ, ತೋಟಪ್ಪ ಉಳ್ಳಾಗಡ್ಡಿ, ನಿಂಗಪ್ಪ ಮಾದರ, ಅಯ್ಯಪ್ಪ ಮಾದರ, ಜೆ.ಎಸ್. ಜುಮ್ಮಣ್ಣವರ ಮುಂತಾದವರಿದ್ದರು.

Tap to resize

Latest Videos

undefined

ಚುನಾವಣೆ ಬಳಿಕ ಕಾಂಗ್ರೆಸ್ ಇಬ್ಭಾಗ: ಕಾಂಗ್ರೆಸ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.  ಸುದ್ದಿಗಾರರ ಜೊತೆ ಮಾತನಾಡಿ, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗ ಆಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದರು. 

ಬಿಜೆಪಿ ಬೆಳವಣಿಗೆಗೆ ಕಾರ್ಯಕರ್ತರ ತ್ಯಾಗ ಅಪಾರ: ವಿಶ್ವೇಶ್ವರ ಹೆಗಡೆ ಕಾಗೇರಿ

ಕಾಂಗ್ರೆಸ್‌ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಿರುವ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ. ಆದರೆ, ಈ ಬಾರಿ ಈ ಪ್ರಮಾಣ ಜಾಸ್ತಿಯಾಗಿದೆ ಎಂದರು. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್‌ನವರು ಸುಮಾರು ಹತ್ತು ಹನ್ನೆರಡು ಜನ ಮಂತ್ರಿಗಳಿಗೆ ಹೇಳಿದ್ದರು. ಆದರೆ, ಅವರಿಗೆ ಆರಿಸಿ ಬರುವ ವಿಶ್ವಾಸ ಇರಲಿಲ್ಲ, ಹಾಗಾದರೆ ನೀವೇ ಅಭ್ಯರ್ಥಿಯನ್ನು ಕೊಡಿ ಅಂದಾಗ ಅನಿವಾರ್ಯವಾಗಿ ಅವರು ತಮ್ಮ ಮಕ್ಕಳು, ಅಣ್ಣ-ತಮ್ಮಂದಿರಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಟೀಕಿಸಿದರು.

click me!