
ಹಾವೇರಿ(ಮೇ.04): ಹಾವೇರಿ- ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಭರ್ಜರಿ ಪ್ರಚಾರ ಮಾಡಿದ್ದಾರೆ. ಬಿರು ಬಿಸಿಲು ಲೆಕ್ಕಿಸದೇ ಅಖಾಡದಲ್ಲಿ ಬೊಮ್ಮಾಯಿ ಧುಮುಕಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ, ತುಮ್ಮಿನಕಟ್ಟಿ ಗ್ರಾಮಗಳಲ್ಲಿ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಬೊಮ್ಮಾಯಿಗೆ ಮಾಜಿ ಶಾಸಕ ಅರುಣ್ ಕುಮಾರ್, ಬಿಜೆಪಿ ಮುಖಂಡರಾದ ಬಸವರಾಜ ಕೇಲಗಾರ, ಸಂತೋಷ್ ಕುಮಾರ್ ಪಾಟೀಲ್ ಸಾಥ್ ನೀಡಿದ್ದರು. ಹಲಗೇರಿ, ತುಮ್ಮಿನಕಟ್ಟಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಬೊಮ್ಮಾಯಿ ಮತಯಾಚನೆ ಮಾಡಿದ್ದಾರೆ.
ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ; ಸಹೋದರ ಪ್ರಜ್ವಲ್‌ರನ್ನು ದೂರವಿಟ್ಟ ನಿಖಿಲ್ ಕುಮಾರಸ್ವಾಮಿ
ಬಸವರಾಜ ಬೊಮ್ಮಾಯಿ ಅವರಿಗೆ ಹಲಗೇರಿ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದ್ದಾರೆ. ಮತದಾರರ ಬಳಿ ಬಸವರಾಜ ಬೊಮ್ಮಾಯಿ ಮತಯಾಚನೆ ಮಾಡಿದ್ದಾರೆ. ರೋಡ್ ಶೋ ವೇಳೆ ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್‌ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ. ಹೀಗಾಗಿ ಬಾಯಿಗೆ ಬಂದಂತೆ ಲಕ್ಷ ರೂಪಾಯಿ ಕೊಡ್ತೀವಿ ಅಂತ ಪ್ರಚಾರ ಮಾಡ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.
ಮೋದಿಯವರದ್ದು ರೈತರ ಪರ ಇರುವ ಸರ್ಕಾರ. ರೈತರ ಪರವಾದ ನರೇಂದ್ರ ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ತರಬೇಕಿದೆ. ಬಿಜೆಪಿಗೆ ಮತ ನೀಡಿ ಎಂದು ಹಾವೇರಿ-ಗದಗ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.