ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ

Published : Jun 17, 2025, 07:23 AM IST
HC mahadevappa

ಸಾರಾಂಶ

ಸರ್ಕಾರದ ಜಾತಿಗಣತಿ ಮರುಸಮೀಕ್ಷೆಯ ನಿರ್ಧಾರದ ಬಗ್ಗೆ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  ಬೀದರ್‌ :  ಸರ್ಕಾರದ ಜಾತಿಗಣತಿ ಮರುಸಮೀಕ್ಷೆಯ ನಿರ್ಧಾರದ ಬಗ್ಗೆ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದ ಅಂಬೇಡ್ಕರ್‌ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನ ಶಿಲ್ಪಿ ಬಿ.ಆರ್‌. ಅಂಬೇಡ್ಕರ್‌ ಹಾಗೂ ಬಸವಣ್ಣನವರು ಜಾತಿರಹಿತ ಸಮಾಜ ಕಟ್ಟಬೇಕೆಂದು ಬಯಸಿದ್ದರು. ಅದಕ್ಕಾಗಿಯೇ ಬಸವಣ್ಣನವರು ಸಹಪಂಕ್ತಿ ಭೋಜನ, ಅಂತರ್ ಜಾತಿವಿವಾಹಕ್ಕೆ ನಾಂದಿ ಹಾಡಿದರು. ಆದರೆ, ಈಗ ಕೇಂದ್ರ ಹಾಗೂ ರಾಜ್ಯದಲ್ಲಿ ಜಾತಿಗಣತಿ ಮಾಡಲಾಗುತ್ತಿದೆ. ಇದು ಅಂಬೇಡ್ಕರ್‌ ಹಾಗೂ ಬಸವಣ್ಣನವರ ಆಶಯಗಳಿಗೆ ಪೂರಕವಾಗಿ ಇಲ್ಲ ಎಂದು ಬೇಸರ ಹೊರಹಾಕಿದರು.

‘ನನ್ನ ಜೀವನದುದ್ದಕ್ಕೂ ನಾನು ಜಾತಿ ಭೇದ ಮಾಡಿಲ್ಲ. ಆದರೆ, ನೀವೆಲ್ಲಾ ಸೇರಿ ನನ್ನ ಕೆಡಿಸಿ ಬಿಟ್ರಲ್ಲ ಎಂದು ಕ್ಯಾಬಿನೆಟ್‌ನಲ್ಲಿಯೇ ಹೇಳಿದ್ದೆ’ ಎಂದರು.

ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯಗಳ ಪರ ಹಾಗೂ ಸಂವಿಧಾನಕ್ಕೆ ಪೂರಕವಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಟಿಬದ್ಧವಾಗಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಆದರೆ, ಬಿಜೆಪಿಯವರು ಇದರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ಬಗ್ಗೆ ಹರಿಹಾಯ್ದರು.

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ಸೆಪ್ಟೆಂಬರ್ ಬಳಿಕ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಎಂಎಲ್‌ಸಿ ಎಚ್.ವಿಶ್ವನಾಥ್ ಹೇಳಿಕೆಗೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿ, ವಿಶ್ವನಾಥ್ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್ ಯಾವಾಗ ಆ ರೀತಿ ಹೇಳಿದ್ರೋ ಗೊತ್ತಿಲ್ಲ. ಅಂತಹ ಪ್ರಸ್ತಾವನೆ ಇಲ್ಲ. ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಅವರಿದ್ದು, ಅವರೇ ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ನೇರ ಹೊಣೆ ಎನ್ನುವ ವಿಜಯೇಂದ್ರ ಹೇಳಿಕೆ ತುಂಬಾ ಬಾಲಿಷ. ಆ ದುರಂತ ಆಗಬಾರದಿತ್ತು, ಆದರೆ ಆಗಿದೆ. ಅದಕ್ಕೆ ವಿಷಾದವಿದೆ. ದುರ್ಘಟನೆಯಲ್ಲಿನ ಲೋಪ ಕಂಡು ಹಿಡಿಯಲು ತನಿಖೆ ನಡೆಯುತ್ತಿದೆ. ಇದರಲ್ಲಿ ರಾಜಕೀಯ ಬೆರೆಸುವುದು ಮೂರ್ಖತನ. ಈ ಥರ ಘಟನೆ ಉತ್ತರ ಪ್ರದೇಶ ಸೇರಿ ಬೇರೆ ಬೇರೆ ಕಡೆ ಸಹ ನಡೆದಿವೆ. ಗುಜರಾತ್‌ನಲ್ಲಿ ವಿಮಾನ ದುರಂತ ಆಯ್ತು. ನಾವು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೇಳಿದ್ದಿವಾ?. ಇಂತದ್ದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿಗೆ ಕಿವಿಮಾತು ಹೇಳಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸದನದಲ್ಲಿ Siddaramaiah vs Arvind Bellad ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್‌ಗೆ ಸಿಎಂ ಸಂವಿಧಾನ ಪಾಠ
'ಎರಡನೆ ಬೆಳೆಗೆ ನೀರಿಲ್ಲ, ಸಸಿ ನಾಟಿ ಮಾಡಬೇಡಿ' ತುಂಗಭದ್ರಾ ರೈತರಿಗೆ ಸಚಿವ ತಂಗಡಗಿ ಅಚ್ಚರಿಯ ಸಲಹೆ!