ದೇವೇಗೌಡರೇ ನಮಗೆ ಸ್ಟಾರ್‌ ಪ್ರಚಾರಕರು: ನಿಖಿಲ್‌ ಕುಮಾರಸ್ವಾಮಿ

Published : Apr 08, 2023, 12:07 PM IST
ದೇವೇಗೌಡರೇ ನಮಗೆ ಸ್ಟಾರ್‌ ಪ್ರಚಾರಕರು: ನಿಖಿಲ್‌ ಕುಮಾರಸ್ವಾಮಿ

ಸಾರಾಂಶ

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌ ಪ್ರಚಾರಕರಾಗಿದ್ದಾರೆ ಎಂದು ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. 

ಬೆಂಗಳೂರು (ಏ.08): ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌ ಪ್ರಚಾರಕರಾಗಿದ್ದಾರೆ ಎಂದು ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಚಾರಕ್ಕೆ ಯಾವುದೇ ಸಿನಿಮಾ ನಟರನ್ನು ಕರೆಸುವ ಬಗ್ಗೆ ತೀರ್ಮಾನವಾಗಿಲ್ಲ. ಯಾರ ಜತೆಗೂ ಮಾತುಕತೆಯನ್ನೂ ಮಾಡಿಲ್ಲ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌ ಪ್ರಚಾರಕರಾಗಿದ್ದಾರೆ ಎಂದು ತಿಳಿಸಿದರು. ಚುನಾವಣೆ ವೇಳೆ ಸಿನಿಮಾ ನಟರು ಪ್ರಚಾರದಲ್ಲಿ ಭಾಗಿಯಾಗುವುದು ಸಾಮಾನ್ಯ. 

ಸುದೀಪ್‌ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗ ಇದೆ. ಬಿಜೆಪಿ ಎನ್ನುವುದಕ್ಕಿಂತ ಹೆಚ್ಚಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ನನಗೆ ಉತ್ತಮ ಬಾಂಧವ್ಯ, ಸಂಬಂಧವಿದೆ ಎಂದು ಸುದೀಪ್‌ ಅವರೇ ಹೇಳಿದ್ದಾರೆ. ಹೀಗಾಗಿ ಅದು ಅವರ ವೈಯಕ್ತಿಕ ವಿಚಾರ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ದೇವೇ​ಗೌ​ಡರೇ ಹಾಸನ ಕುರಿತು ತೀರ್ಮಾ​ನ ತಗೋತಾರೆ: ನಿಖಿಲ್‌ ಕುಮಾ​ರ​ಸ್ವಾಮಿ

ನಾನು ಚುನಾವಣೆಗೆ ಸ್ಪರ್ಧಿಸಲ್ಲ: ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆ ಇಲ್ಲ ಎಂದು ರಾಮನಗರ ಕ್ಷೇತ್ರ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ರೀತಿಯಲ್ಲಿ ಹಬ್ಬಿಸಲಾಗುತ್ತಿರುವ ವದಂತಿಗಳ ಬಗ್ಗೆ ಟ್ವೀಚ್‌ ಮಾಡಿ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಅ​ನಿತಾ ತಿಳಿಸಿದ್ದಾರೆ.

ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಃ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಆದೇಶ ಗೌರವಿಸಿ ಸ​ರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್‌ ಪಕ್ಷ, ದೇವೇಗೌಡ ಅವರು, ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋುಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಟ್ವೀಚ್‌ನಲ್ಲಿ ಬರೆದಿದ್ದಾರೆ.

ಯೋಗೇಶ್ವರ್‌ಗೆ ಸೋಲಿನ ಮುನ್ಸೂಚನೆ ಸಿಕ್ಕಿದ್ದು ಹತಾಶರಾಗಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರೇಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂತಹ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಮನವಿ ಮಾಡಿದ್ದಾರೆ. ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಿ ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ. ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕೆಂದು ಮನವಿ ಮಾಡುತ್ತೇನೆಂದು ಅ​ನಿತಾ ಕುಮಾ​ರ​ಸ್ವಾಮಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್