ಮೋದಿಯ ರಾಜತಾಂತ್ರಿಕತೆ ಮೆಚ್ಚಿದ ದೇವೇಗೌಡರಿಗೆ ಬಿಜೆಪಿ ನಾಯಕರಿಂದ ಅಭಿನಂದನೆ

Published : Sep 07, 2025, 06:39 AM IST
HD Deve Gowda

ಸಾರಾಂಶ

ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ನೈಪುಣ್ಯತೆ ಮೆಚ್ಚಿ ಪತ್ರ ಬರೆದಿದ್ದ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಬೆಂಗಳೂರು (ಸೆ.07): ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ನೈಪುಣ್ಯತೆ ಮೆಚ್ಚಿ ಪತ್ರ ಬರೆದಿದ್ದ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಬಿ.ವೈ.ವಿಜಯೇಂದ್ರ, ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಶಾಸಕ ಎಂ.ಕೃಷ್ಣಪ್ಪ, ಸುರೇಶ್‌ ಗೌಡ, ಸಿ.ಕೆ.ರಾಮಮೂರ್ತಿ, ಮಾಜಿ ಶಾಸಕ ನಂದೀಶ್‌ ರೆಡ್ಡಿ ಸೇರಿದಂತೆ ಕೆಲ ನಾಯಕರು ಶನಿವಾರ ಸಂಜೆ ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿ ದೇವೇಗೌಡ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಗೌರವಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹಿರಿಯ ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇವೆ. ಪ್ರಧಾನಿ ಮೋದಿ ಅವರು ಶಾಂಘೈ ಶೃಂಗಸಭೆಯಲ್ಲಿ ಪಾಲ್ಗೊಂಡ ಬಗ್ಗೆ ದೇವೇಗೌಡರು ಪತ್ರ ಬರೆದು ಅಭಿನಂದನೆ ತಿಳಿಸಿದ್ದರು. ಮೋದಿ ಅವರ ದಿಟ್ಟ ಹೆಜ್ಜೆಯನ್ನು ಶ್ಲಾಘಿಸಿದ್ದರು. ಇಂತಹ ಇಳಿಯ ವಯಸ್ಸಿನಲ್ಲೂ ದೇಶದ ಬಗ್ಗೆ ಅವರ ಕಾಳಜಿ, ಪ್ರಧಾನಿ ಮೇಲೆ ಇರಿಸಿರುವ ವಿಶ್ವಾಸ ನಮ್ಮೆಲ್ಲರಿಗೂ ಮಾದರಿ. ಹೀಗಾಗಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇವೆ. ಸುಮಾರು ಅರ್ಧ ತಾಸು ಅವರು ದೇಶದ ರಾಜಕೀಯದ ಬಗ್ಗೆ ಮಾತನಾಡಿದರು. ತಾವು ಪ್ರಧಾನಿ ಆಗಿದ್ದಾಗ ನಡೆದ ಘಟನೆಗಳನ್ನು ಮೆಲುಕು ಹಾಕಿದರು ಎಂದರು.

ಎಚ್‌ಡಿಡಿ ನಮ್ಮ ಹೆಮ್ಮೆಯ ನಾಯಕ: ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ನಮ್ಮ ಹೆಮ್ಮೆಯ ನಾಯಕರೂ ಆದ ಮುತ್ಸದ್ದಿ ದೇವೇಗೌಡರು ಹಲವು ಸಂದರ್ಭಗಳಲ್ಲಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಬೆಂಬಲಿಸಿದ್ದಾರೆ. ದೇವೇಗೌಡರ ಕಾರ್ಯ ಶೈಲಿಗೆ ಅಭಿನಂದನೆ ತಿಳಿಸಿದ್ದೇವೆ. ನಾವು ನಮ್ಮ ಪಕ್ಷ ಬಲಪಡಿಸಲು, ಅವರು ಅವರ ಪಕ್ಷ ಬಲಪಡಿಸಲು ಕಾರ್ಯತಂತ್ರ ಮಾಡುತ್ತಿದ್ದಾರೆ. ನಮ್ಮ ನಡುವೆ ಉತ್ತಮ ಮೈತ್ರಿಯಿದೆ. ಸಮನ್ವಯತೆಯೂ ಚೆನ್ನಾಗಿದೆ. ಒಂದೇ ಉದ್ದೇಶಕ್ಕೆ ನಮ್ಮಿಬ್ಬರ ಹೋರಾಟ ಇರಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಟ್ರಂಪ್ ತೆರಿಗೆ ನೀತಿ ವಿಚಾರದಲ್ಲಿ ಬಿಕ್ಕಟ್ಟು ಎದುರಾದಾಗ ಮೋದಿ ಅವರು ಹಲವು ದೇಶಗಳ ಜತೆ ವ್ಯಾಪಾರ ವಹಿವಾಟು ಒಪ್ಪಂದ ಮಾಡಿಕೊಂಡು ದೇಶದ ಹಿತ ಕಾಪಾಡುವ ಕ್ರಮ ಕೈಗೊಂಡಿದ್ದರು. 48 ಗಂಟೆಗಳಲ್ಲೇ ತಮ್ಮ ನಾಯಕತ್ವದ ಸಾಮರ್ಥ್ಯ ಪ್ರದರ್ಶಿಸಿದ್ದರು. ಇದನ್ನು ಬೆಂಬಲಿಸಿ ದೇವೇಗೌಡರು ಪತ್ರ ಬರೆದಿದ್ದರು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!