ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಆಸಕ್ತಿ ತೋರಿರುವುದರಿಂದ ಕ್ಷೇತ್ರದಲ್ಲಿ ಗೊಂದಲದ ವಾತಾವರಣ ಮೂಡಿದ್ದು, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯಿದೆ.
ಬೆಂಗಳೂರು (ಫೆ.03): ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಆಸಕ್ತಿ ತೋರಿರುವುದರಿಂದ ಕ್ಷೇತ್ರದಲ್ಲಿ ಗೊಂದಲದ ವಾತಾವರಣ ಮೂಡಿದ್ದು, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯಿದೆ.
ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತವರ ಕುಟುಂಬವೇ ಬಹುತೇಕ ತೀರ್ಮಾನ ಕೈಗೊಳ್ಳಲಿದೆ. ವಿಧಾನಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಚಾರದಲ್ಲಿ ಭವಾನಿ ರೇವಣ್ಣ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವ್ಯತಿರಿಕ್ತವಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎಂಬುದು ಯಕ್ಷಪ್ರಶ್ನೆಯಾಗಿದೆ. ಭವಾನಿ ರೇವಣ್ಣ ಅವರು ತಾವೇ ಅಭ್ಯರ್ಥಿ ಎಂದು ಹೇಳಿದರೆ, ಕುಮಾರಸ್ವಾಮಿ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ. ಇದು ತೀವ್ರ ಚರ್ಚೆಗೆ ಗ್ರಾಸವಾಗುವುದರ ಜತೆಗೆ ಗೊಂದಲವನ್ನುಂಟು ಮಾಡಿದೆ.
ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪರಮೇಶ್ವರ್ ರಾಜೀನಾಮೆ: ಮನವೊಲಿಕೆಗೆ ನಾಯಕರ ಕಸರತ್ತು
ಹಾಸನ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ವಿಚಾರದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿಯೇ ಸಮಸ್ಯೆ ಬಗೆಹರಿಸುವ ಸಾಧ್ಯತೆ ಇದೆ. ಈಗಾಗಲೇ ದೇವೇಗೌಡ ಅವರು ಭವಾನಿ ರೇವಣ್ಣಗೆ ಈ ವಿಚಾರದಲ್ಲಿ ಸುಮ್ಮನೆ ಇರುವಂತೆ ಹೇಳಿದ್ದಾರೆ. ಹೀಗಾಗಿ ತಾತ್ಕಾಲಿಕವಾಗಿ ಸಮಸ್ಯೆ ನಿವಾರಣೆಯಾಗಿದೆ. ಟಿಕೆಟ್ ಘೋಷಣೆ ಸಮಯದಲ್ಲಿ ಮತ್ತೆ ಸಮಸ್ಯೆ ಮುನ್ನೆಲೆಗೆ ಬರುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ಅವರೇ ಸೂಕ್ತ ಪರಿಹಾರ ಸೂಚಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಾಳೆ ಘೋಷಿತ ಅಭ್ಯರ್ಥಿಗಳ ಸಭೆ: ಜೆಡಿಎಸ್ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕೈಗೊಂಡಿರುವ ರಥಯಾತ್ರೆಯಲ್ಲಿ ತೊಡಗಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ಈಗಾಗಲೇ ಘೋಷಣೆ ಮಾಡಿರುವ ಚುನಾವಣಾ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ.
137 ‘ಕಾಂಗ್ರೆಸ್’ ಅಭ್ಯರ್ಥಿ ಪಟ್ಟಿ ರೆಡಿ: 67 ಹಾಲಿ ಶಾಸಕರಿಗೆ ಟಿಕೆಟ್‌ಗೆ ಒಲವು
90ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಅಭ್ಯರ್ಥಿಗಳು ಕ್ಷೇತ್ರದಲ್ಲಿ ನಡೆಸುತ್ತಿರುವ ಪ್ರಚಾರ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ರಥಯಾತ್ರೆಯ ಬಳಿಕ ಕ್ಷೇತ್ರದಲ್ಲಿ ನಡೆಯುತ್ತಿರುವ ಬದಲಾವಣೆ ಮತ್ತು ಜನರ ಅಭಿಪ್ರಾಯಗಳಲ್ಲಿನ ಬದಲಾವಣೆ ಕುರಿತು ಪರಮಾರ್ಶೆ ನಡೆಸಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಹುಮತ ಪಡೆದುಕೊಳ್ಳಲೇಬೇಕು ಎಂಬ ಛಲದೊಂದಿಗೆ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಘೋಷಿತ ಕ್ಷೇತ್ರಗಳ ಅಭ್ಯರ್ಥಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.