ರಾಷ್ಟ್ರಪತಿ ಚುನಾವಣೆಗೆ ದೇವೇಗೌಡ್ರು ಸ್ಪರ್ಧಿಸುತ್ತಾರಾ? ಎಲ್ಲಾ ಗೊಂದಲಗಳಿಗೆ HDK ತೆರೆ

Published : Jun 17, 2022, 10:30 PM IST
ರಾಷ್ಟ್ರಪತಿ ಚುನಾವಣೆಗೆ ದೇವೇಗೌಡ್ರು ಸ್ಪರ್ಧಿಸುತ್ತಾರಾ? ಎಲ್ಲಾ ಗೊಂದಲಗಳಿಗೆ HDK ತೆರೆ

ಸಾರಾಂಶ

* ತೀವ್ರ ಕುತೂಹಲ ಮೂಡಿಸಿದ ರಾಷ್ಟ್ರಪತಿ ಚುನಾವಣೆ * ರಾಷ್ಟ್ರಪತಿ ಚುನಾವಣೆಗೆ ದೇವೇಗೌಡ ಸ್ಪರ್ಧೆ ಮಾಡ್ತಾರಾ? * ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಬೆಂಗಳೂರು, (ಜೂನ್.17): ಜುಲೈಯಲ್ಲಿ ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರದ ಅವಧಿ ಮುಕ್ತಾಯ ವಾಗಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ರಾಷ್ಟ್ರಪತಿ ಚುನಾವಣೆ (President Election) ತೀವ್ರ ಕುತೂಹಲ ಮೂಡಿಸಿದೆ.

ಅತೀ ದೊಡ್ಡ ಕೂಟವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಇನ್ನೂ ಕೂಡಾ ತನ್ನ ಅಭ್ಯರ್ಥಿಯನ್ನು ಅಧಿಕೃತಗೊಳಿಸಿಲ್ಲ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಎನ್‍ಡಿಎಯೇತರ ಪಕ್ಷಗಳ ಸಭೆ ನಡೆದಿದ್ದರೂ ಅಭ್ಯರ್ಥಿ ಅಂತಿಮವಾಗಿಲ್ಲ. 

ಇನ್ನು ರಾಷ್ಟ್ರಪತಿ ಚುನಾವಣೆಗೆ ಹಲವರ ಹೆಸರುಗಳು ಕೇಳಿಬರುತ್ತಿವೆ. ಅದರಲ್ಲೂ ಪ್ರಮುಖವಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೆಸರು ಕೇಳಿಬರುತ್ತಿದೆ.  ಈ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ದೇವೇಗೌಡ ಅವರ ಪುತ್ರ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಷ್ಟ್ರಪತಿ ಚುನಾವಣೆ: ದಕ್ಷಿಣ ಭಾರತದ ವ್ಯಕ್ತಿಗೆ ಅದೃಷ್ಟ? ಆದಿವಾಸಿ ಮಹಿಳೆಗೆ ಪಟ್ಟ?

ಬೆಂಗಳೂರಿನಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ದೆಹಲಿಯಲ್ಲಿ ನಡೆದ ಪ್ರತಿಪಕ್ಷ ನಾಯಕರ ಸಭೆಗೆ ನಮ್ಮ ಕುಟುಂಬದ ಮೇಲೆ ಗೌರವವಿಟ್ಟು ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಕರೆದಿದ್ದರು. ಸಭೆಯಲ್ಲಿ 17 ಪಕ್ಷಗಳ ನಾಯಕರು ಭಾಗವಹಿಸಿದ್ದರು. ಅಂದು ನಡೆದ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಅಂತಿಮವಾಗಿಲ್ಲ ಎಂದರು.

 ಜೂನ್ 20ರಂದು ವಿಪಕ್ಷ ನಾಯಕರ ಮತ್ತೊಂದು ಸುತ್ತಿನ ಸಭೆಯಿದೆ. ಜೂನ್​​ 20ರಂದು ನಡೆಯುವ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಂತಿಮವಾಗುತ್ತದೆ. ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ. ರಾಷ್ಟ್ರಪತಿ ಹುದ್ದೆಗೆ ಹೆಚ್.ಡಿ.ದೇವೇಗೌಡರು ಸ್ಪರ್ಧೆ ಮಾಡುವುದಿಲ್ಲ. ದೇವೇಗೌಡರಿಗೆ ಒಮ್ಮೆ ಸ್ವತಂತ್ರ ಸರ್ಕಾರ ಬರಬೇಕೆಂಬ ಆಸೆಯಿದೆ ಎಂದು ಸ್ಪಷ್ಟಪಡಿಸಿದರು.

ಜುಲೈ 1ರಂದು ಜನತಾ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ 
ಜುಲೈ 1ರಂದು ಜನತಾ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತೇವೆ. ಜನತಾ ಮಿತ್ರ ಕಾರ್ಯಕ್ರಮದ ಬಗ್ಗೆ ಸಭೆಯಲ್ಲಿ ಚರ್ಚಿಸುತ್ತೇವೆ. ಬೆಂಗಳೂರಿನಲ್ಲಿ ಒಟ್ಟು 15 ವಾಹನಗಳು ಸಂಚಾರ ಮಾಡುತ್ತೇವೆ. ಬೆಂಗಳೂರಿಗೆ ದೇವೆಗೌಡರ, ಕುಮಾರಸ್ವಾಮಿ ಅವರ ಕೊಡುಗೆ ಬಗ್ಗೆ ಪ್ರಚಾರ ಮಾಡುತ್ತೇವೆ. ಕಾಂಗ್ರೆಸ್-ಬಿಜೆಪಿ ಸರ್ಕಾರದಲ್ಲಿ ಆಗಿರುವ ಅನ್ಯಾಯ, ಅಕ್ರಮ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು. 

ನಿತ್ಯ ಮಳೆ ಬಂದರೆ ಏನ್ ಸಮಸ್ಯೆ ಆಗುತ್ತೆ ಅಂತ ನೋಡಿದ್ದೇನೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಪ್ರತಿ ರಸ್ತೆಗಳು, ಮನೆಗಳಿಗೆ ಭೇಟಿ, ಮನೆ ಮನೆಗೆ ಕರಪತ್ರ ಹಂಚಿಕೆ ಮಾಡುತ್ತೇವೆ. ನಾಗರಿಕರು, ಮಹಿಳೆಯರು, ಯುವಕರ ನಿರೀಕ್ಷೆಗಳ ಬಗ್ಗೆ ಮಾಹಿತಿ ನೀಡುತ್ತವೆ. ಎಲ್ಲರ ನಿರೀಕ್ಷೆಗಳ ಮಾಹಿತಿಯನ್ನು ಸಂಗ್ರಹ ಮಾಡುತ್ತೇವೆ.  ಜನರು ಕೊಡುವ ಸಲಹೆಗಳನ್ನು ಸ್ವೀಕಾರ ಮಾಡುತ್ತೇವೆ. ನಮಗೆ ಒಂದು ಬಾರಿ ಅವಕಾಶ ಕೊಡಿ ಅಂತ ಅಭಿಯಾನ ಮಾಡುತ್ತೇವೆ. ಕೊನೆ ದಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ 50 ಸಾವಿರ ಜನ ಸೇರಿಸಿ ಸಮಾವೇಶ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌