
ಬೆಂಗಳೂರು, (ಏ.27): ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟದ ಕ್ರಮವಾಗಿ ಎಲ್ಲಾ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯನ್ನು 6 ತಿಂಗಳ ಕಾಲ ಮುಂದೂಡಿ, ಚುನಾವಣಾ ವಿಜಯೋತ್ಸವನ್ನು ಮೊಟಕುಗೊಳಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಎಚ್ ಡಿ. ದೇವೇಗೌಡ, ಮುಂದಿನ ಆರು ತಿಂಗಳ ಕಾಲ ಎಲ್ಲಾ ಬೃಹತ್ ಜನಸಂಖ್ಯೆ ಸೇರುವ ಕಾರ್ಯಕ್ರಮವನ್ನು ರದ್ದುಪಡಿಸುವುದು ಸೇರಿದಂತೆ ಕೋವಿಡ್-19 ನಿಯಂತ್ರಣಕ್ಕೆ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.
14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ
ಈ ತಿಂಗಳಿನಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ರಾಜ್ಯಗಳಲ್ಲಿ ಚುನಾವಣಾ ವಿಜಯೋತ್ಸವವನ್ನು ಮೊಟಕುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಿ, ಎಲ್ಲಾ ಉಪ ಚುನಾವಣೆಗಳು ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಆರು ತಿಂಗಳುಗಳ ಕಾಲ ಮುಂದೂಡಬೇಕೆಂದು ಅವರು ಹೇಳಿದ್ದಾರೆ.
ಈ ಅವಧಿಯಲ್ಲಿ, ಚುನಾವಣಾ ಆಯೋಗವು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸಲು ಹೊಸ ನಿಯಮಗಳನ್ನು ರೂಪಿಸಬಹುದು ಮತ್ತು ಏಕಕಾಲದಲ್ಲಿ, ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕಾಗಿದೆ ಎಂದು ದೇವೇಗೌಡ ತಿಳಿಸಿದ್ದಾರೆ.
ಎಚ್. ಡಿ. ದೇವೇಗೌಡ ದಂಪತಿಗೆ ಕೊರೋನಾ: ಮಾಜಿ ಪಿಎಂಗೆ ಮೋದಿ ವಿಶೇಷ ಆಫರ್!
ಸಾಂಕ್ರಾಮಿಕ ನಿಯಂತ್ರಣ ಹಾಗೂ ಲಸಿಕೆ ಕಾರ್ಯಕ್ರಮಗಳನ್ನು ಹೆಚ್ಚಿಸಿ, ಜನರ ಪ್ರಾಣವನ್ನು ಉಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುವ ಎಲ್ಲಾ ರಚನಾತ್ಮಕ ನಿರ್ಧಾರಗಳನ್ನು ಬೆಂಬಲಿಸುವುದಾಗಿ ಹೇಳಿದ ದೇವೇಗೌಡ, ಈ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ. ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಯನ್ನು ಜಿಲ್ಲಾ ಆಸ್ಪತ್ರೆಗಳಿಗೆ ನೀಡಬೇಕಾಗಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಾರ್ ರೂಮ್ ಆಗಬೇಕಾಗಿದೆ ಎಂದರು.
ಪ್ರಸ್ತುತ ದೊಡ್ಡ ನಗರಗಳತ್ತ ಮಾತ್ರ ಗಮನ ಹರಿಸಲಾಗುತ್ತಿದೆ. ಆದರೆ, ನಗರಯೇತರ ಜಿಲ್ಲೆಗಳು ಮತ್ತು ತಾಲೂಕ್ ಕೇಂದ್ರಗಳಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಹಳ್ಳಿ ಕ್ಲಸ್ಟರ್ ಗಳತ್ತ ತುರ್ತಾಗಿ ಗಮನಹರಿಸಬೇಕಾದ ಅಗತ್ಯವಿದೆ. ಈ ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಪಾತ್ರ ಮಹತ್ವದ್ದಾಗಿದೆ. ಲಸಿಕೆ ಬಗ್ಗೆ ಇನ್ನೂ ಸ್ಪಷ್ಟ ಸಂದೇಶ ಇಲ್ಲದಂತಾಗಿದೆ. ಲಸಿಕೆಯಿಂದ ನಾವು ಮಾತ್ರವಲ್ಲದೇ, ನಮ್ಮವರನ್ನು ಕೂಡಾ ಕಾಪಾಡಬೇಕಾಗಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.