
ಹಾಸನ, (ಸೆ.19): ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತಿದೆ ಎಂಬೆಲ್ಲ ಆರೋಪಗಳು ಸತ್ಯವೆನಿಸುತ್ತಿದೆ. ಯಾಕಂದ್ರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ದೇವೇಗೌಡರ ಮೊಮ್ಮಗ ಅಂದ್ರೆ ಮಾಜಿ ಸಚಿವ ಎಚ್.ಡಿ. ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ ಅವರು ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಶನಿವಾರ ಅವಿರೋಧ ಆಯ್ಕೆಯಾದರು.
ಪಕ್ಷ ವಿರೋಧಿಗಳಿಗೆ ವರಿಷ್ಠರ ಬೆಂಬಲ: ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಜೆಡಿಎಸ್ ಶಾಸಕ
ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಡಾ.ಸೂರಜ್ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯಾದರು. ಆ ಮೂಲಕ ಮಾಜಿ ದೇವೇಗೌಡರ ಮತ್ತೊಂದು ಕುಡಿ ನೇರ ರಾಜಕೀಯ ಅಖಾಡಕ್ಕೆ ಪ್ರವೇಶಿಸಿದಂತಾಯ್ತು.
ಚನ್ನರಾಯಪಟ್ಟಣ ತಾಲೂಕಿನಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಡಾ.ಸೂರಜ್, ದಂಡಿಗನಹಳ್ಳಿ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಚಟುವಟಿಕೆಗಳ ಮೂಲಕ ಸಾರ್ವಜನಿಕ ಜೀವನಕ್ಕೆ ಹತ್ತಿರವಾಗಿದ್ದಾರೆ. ಅಲ್ಲದೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಅಖಾಡಕ್ಕಿದರೂ ಅಚ್ಚರಿಪಡಬೇಕಿಲ್ಲ.
ಈಗಾಗಲೇ ಎಚ್.ಡಿ. ರೇವಣ್ಣ ಅವರು ಹಾಸನದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ. ರೇವಣ್ಣನವರ ಪತ್ನಿ ಭವಾನಿಯವರು ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ. ಇನ್ನು ಸಹೋದರ ಪ್ರಜ್ವಲ್ ರೇವಣ್ಣ ಹಾಸನ ಸಂಸದರಾಗಿದ್ದಾರೆ. ಇದೀಗ ಬಾಕಿ ಉಳಿದಿದ್ದ ಸೂರಜ್ ಅವರು ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗುವುದರೊಂದಿಗೆ ಪಾಲಿಟಿಕ್ಸ್‌ಗೆ ಗ್ರ್ಯಾಂಡ್ ಎಂಟ್ರಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.