ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಸದ್ದು ಜೋರಾಗಿದೆ. ರಾಜಕೀಯ ನಾಯಕರು ಸಿ.ಡಿ.ಆರೋಪಗಳನ್ನು ಮಾಡುತ್ತಿದ್ದಾರೆ. ಇದರ ಮಧ್ಯೆ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಬಗ್ಗೆ ಮಾಜಿ ಸಿಎಂ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರು, (ಮಾ.05): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ರಮೇಶ್ ಜಾರಕಿಹೊಳಿ ಹನಿಟ್ರ್ಯಾಟ್ ಬಲೆ ಬಿದ್ರಾ..? ಅವಥಾ ರಾಜಕೀಯವಾಗಿ ಅವರನ್ನ ಮುಗಿಸಲು ಈ ರೀತಿ ಮಾಡಿದ್ರಾ ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಸಲೀಲೆ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ FIR?
ರಮೇಶ್ ಜಾರಕಿಹೊಳಿ ಅವರ ವಿರುದ್ಧ ಸಿ.ಡಿ ಬಿಡುಗಡೆಯಾದ ಪ್ರಕರಣದಲ್ಲಿ 5 ಕೋಟಿ ರೂಪಾಯಿಯ ಡೀಲ್ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಇಂದು (ಶುಕ್ರವಾರ) ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಇಡೀ ಪ್ರಕರಣ 5 ಕೋಟಿಗೆ ಡೀಲ್ ಆಗಿದೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
3 ತಿಂಗಳ ಹಿಂದೆಯೇ ಸಿ.ಡಿ ಮುಂದಿಟ್ಟುಕೊಂಡು ವ್ಯವಹಾರ ನಡೆಸಿದ್ದಾರೆ. ಇದರ ಹಿಂದೆ ದೊಡ್ಡ ದೊಡ್ಡವರ ಕೈವಾಡ ಇದೆ. ಒಬ್ಬನಲ್ಲ.. ಒಂದು ತಂಡ ಕಟ್ಟಿಕೊಂಡು ದುಡ್ಡು ಮಾಡಲು ನಿಂತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಅವರಿಬ್ಬರೇ ಸೇರಿ ವಿಡಿಯೋ ಮಾಡಿಕೊಂಡಿರಬಹುದಲ್ಲವೇ? ಅವರಿಬ್ಬರಲ್ಲೇ ಯಾರಾದರೂ ಒಬ್ಬರು ಕೊಟ್ಟಿರಬೇಕಲ್ವೆ? ಈತನ ಬಳಿ ಹೇಗೆ ಬಂತು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ರು. ಇದರ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು. ಸಮಾಜದಲ್ಲಿ ಹೇಸಿಗೆ ಹುಟ್ಟಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.