
ಬೆಂಗಳೂರು(ನ.11): ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪರಿಣಾಮ ಉಭಯ ಪಕ್ಷಗಳ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ವೈವಿಜಯೇಂದ್ರ ಅವರು ಜೋಡೆತ್ತುಗಳಂತೆ ರಾಜ್ಯಾದ್ಯಂತ ಸಂಚರಿಸಲಿದ್ದಾರೆ.
ಉಭಯ ಪಕ್ಷಗಳ ಮೈತ್ರಿ ಬಗ್ಗೆ ಈಗಾಗಲೇ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಿದೆ. ಇನ್ನು ಕ್ಷೇತ್ರಗಳ ಹಂಚಿಕೆ ಆಗುವುದು ಬಾಕಿ ಉಳಿದಿದೆ. ಒಟ್ಟು 28 ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ನಾಲ್ಕರಿಂದ ಐದು ಕ್ಷೇತ್ರಗಳನ್ನು ಬಿಟ್ಟು ಕೊಡುವ ಚರ್ಚೆ ನಡೆದಿದ್ದು, ಇದೀಗ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಅವರು ಈ ವಿಷಯದಲ್ಲಿ ಮುಂದಾಳತ್ವ ತೆಗೆದುಕೊಳ್ಳಬೇಕಿದೆ.
ಪುತ್ರ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಬಿಜೆಪಿಯಲ್ಲಿ ಕೊನೆಗೂ ಮೇಲುಗೈ ಸಾಧಿಸಿದ ಯಡಿಯೂರಪ್ಪ..!
ದೆಹಲಿಯಲ್ಲಿ ಹೊಂದಾಣಿಕೆ ಮಾಡಿಕೊಂಡಷ್ಟು ಸುಲಭವಾಗಿ ರಾಜ್ಯದಲ್ಲಿ ಅಲ್ಲ ಎಂಬುದು ಎರಡೂ ಪಕ್ಷಗಳ ನಾಯಕರಿಗೆ ಗೊತ್ತಿದೆ. ಹೀಗಾಗಿ, ಸಾಕಷ್ಟು ಸಿದ್ಧತೆಯೊಂದಿಗೆ ಉಭಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಮುನಿಸು ಉಂಟಾಗದಂತೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಜತೆಗೆ ಆಡಳಿತಾರೂಢ ಕಾಂಗ್ರೆಸ್ಸಿನ ಜೋಡೆತ್ತುಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಎದುರಿಸಿ ಪಕ್ಷ ಸಂಘಟನೆ ಮಾಡಲು ಪ್ರವಾಸ ಕೈಗೊಳ್ಳುತ್ತಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.