ಎಸಿ ರೂಂ ಬಿಟ್ಟು ಸಂತ್ರಸ್ತರ ನೆರವಿಗೆ ಧಾವಿಸಿ: ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

Published : Oct 01, 2025, 08:35 AM ISTUpdated : Oct 01, 2025, 08:36 AM IST
HD Kumaraswamy

ಸಾರಾಂಶ

ಸೋಮಾರಿತನ ಬಿಟ್ಟು ಮೊದಲು ನೆರೆ ಸಂತ್ರಸ್ತರ ನೆರವಿಗೆ ಬನ್ನಿ. ತಕ್ಷಣವೇ ಕಲ್ಯಾಣ ಕರ್ನಾಟಕ್ಕೆ ನೆರೆ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ (ಅ.01): ಬೆಂಗಳೂರಿನಲ್ಲಿ ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡುವುದಲ್ಲ, ಸೋಮಾರಿತನ ಬಿಟ್ಟು ಮೊದಲು ನೆರೆ ಸಂತ್ರಸ್ತರ ನೆರವಿಗೆ ಬನ್ನಿ. ತಕ್ಷಣವೇ ಕಲ್ಯಾಣ ಕರ್ನಾಟಕ್ಕೆ ನೆರೆ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕದಲ್ಲಿ ನೆರೆ ಸಂಕಷ್ಟದಲ್ಲಿ ಜನರಿದ್ದರೆ ರಾಜ್ಯದಲ್ಲಿರುವ ಸರಕಾರ ʼಕುಂಭಕರ್ಣ ನಿದ್ರೆʼಯಲ್ಲಿದೆ ಎಂದು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿ ಸೇರಿ ಸಂಪುಟದ 36 ಸಚಿವರಿಗೆ ಇವತ್ತು ಜ್ಞಾನೋದಯವಾಗಿದೆ. ಅಷ್ಟೂ ಸಚಿವರು ಇಲ್ಲಿವರೆಗೆ ಏನು ಮಾಡುತ್ತಿದ್ದರು? ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಂದ ಸರ್ಕಾರದ ವಿರುದ್ಧ ಟೀಕೆಗಳು ಶುರುವಾದ ಮೇಲೆ ಸಿಎಂ ನೆರೆಪೀಡಿತ ಜಿಲ್ಲೆಗಳಿಗೆ ತೆರಳಿ ವೈಮಾನಿಕ ವೀಕ್ಷಣೆ ಮಾಡಿದ್ದಾರೆ. ಆದರೆ, ನೆರೆ ಪ್ರತಿ ವರ್ಷದ ಸಮಸ್ಯೆ. ಕಳೆದ 3 ತಿಂಗಳಿಂದ ಈ ಸರ್ಕಾರ ಗಾಢ ನಿದ್ರೆಯಲ್ಲಿತ್ತು ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಸಿಎಂ ಹೇಳಿಕೆ ಬಗ್ಗೆ ನಿರಾಸೆ: ಪರಿಹಾರಕ್ಕೆ ಒತ್ತಾಯ ಮಾಡುತ್ತಿರುವ ಪ್ರತಿಪಕ್ಷಗಳ ಬಗ್ಗೆ ಸಿಎಂ ನೀಡುತ್ತಿರುವ ಉತ್ತರ, ಹೇಳಿಕೆಗಳನ್ನು ನೋಡಿದರೆ ನಿರಾಸೆಯಾಗುತ್ತದೆ. ಪ್ರತಿಪಕ್ಷವನ್ನು ಬೈದರೆ ನೆರೆ ಸಂತ್ರಸ್ತರ ಸಮಸ್ಯೆ ನೀಗುತ್ತದೆಯೇ? ಅವರ ಹೇಳಿಕೆಗಳು ಅವರು ಅಲಂಕರಿಸುವ ಹುದ್ದೆಗೆ ತಕ್ಕುದಾಗಿಲ್ಲ. ಸಂಪುಟದಲ್ಲಿ 36 ಜನ ಮಂತ್ರಿಗಳಿದ್ದಾರೆ. ಅವರೆಲ್ಲರೂ ಎಲ್ಲಿ ಹೋಗಿದ್ದಾರೆ? ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡಿದ್ದು ಸಾಕು ಎಂದು ಗುಡುಗಿದರು.

ಡಿಕೆಶಿ ಜೈಲಿಗೆ ಹೋಗುವ ದಿನ ಬಂದೇ ಬರುತ್ತೆ

ನೀವು ಯಾವ ರೀತಿ ಆಟ ಆಡುತ್ತಿದ್ದೀರಾ ಅಂತ ಗೊತ್ತಿದೆ. ಎಲ್ಲದಕ್ಕೂ ದೇವರು ತಕ್ಕ ಉತ್ತರ ಕೊಟ್ಟೆ ಕೊಡುತ್ತಾನೆ. ನೀವು ಮುಂದೆ ಜೈಲಿಗೆ ಹೋಗುವ ದಿನ ಬಂದೇ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಡದಿ ಟೌನ್‌ಶಿಪ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರು ಬಿಲ್ಲುಕೆಂಪನಹಳ್ಳಿಯಲ್ಲಿ ಒಬ್ಬ ವ್ಯಕ್ತಿಯ ಭೂಮಿ ಲಪಟಾಯಿಸಿ ಬಿಲ್ಡಿಂಗ್ ಕಟ್ಟಿಕೊಂಡರು. ನಿವೃತ್ತ ಯೋಧನ ಜಮೀನು ಕಬಳಿಸಿದರು. ಅವರಿಗೆ ದೇವೇಗೌಡರು ಹಾಗೂ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!