
ಮೈಸೂರು(ಮಾ.28): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು. ಬುಧವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೊಸ ಮುಖವಾದರೆ, ಕುಮಾರಸ್ವಾಮಿಯೂ ಹೊಸ ಮುಖ ಅಲ್ಲವೇ? ನಮ್ಮ ಅಭ್ಯರ್ಥಿ ಮಂಡ್ಯದವರು. ಕುಮಾರಸ್ವಾಮಿ ಹಾಸನದವರಲ್ಲವೇ ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮಗನೇ ಸೋತಿಲ್ಲವೇ? ಮುಖ್ಯಮಂತ್ರಿ ಆಗಿದ್ದಾಗಲೇ ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಈಗ ಹೇಗೆ ಗೆಲ್ಲೋಕೆ ಆಗುತ್ತದೆ? ಕುಮಾರಸ್ವಾಮಿ ಸೋಲುವುದಂತು ಗ್ಯಾರಂಟಿ. ಚುನಾವಣೆ ಸಂಬಂಧ ಸುಮಲತಾ ಜೊತೆ ಮಾತನಾಡಿಲ್ಲ. ನಮ್ಮ ಅಭ್ಯರ್ಥಿ ಸ್ಟ್ರಾಂಗ್ ಇದ್ದಾರೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯನ್ನು ನಾವು ಸೋಲಿಸುತ್ತೇವೆ ಎಂದರು.
ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಇಳಿಯೋದು ಗ್ಯಾರಂಟಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೊಟ್ಟ ಕಾರಣವೇನು?
ಕೋಲಾರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ
ಕೋಲಾರದಲ್ಲಿ ಅಸಮಾಧಾನ ಇರುವುದು ಸತ್ಯ. ದಲಿತರ ಎಡಗೈ ಬದಲು ಬಲಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಈ ಬಗ್ಗೆ ನಾನು ಅವರ ಜೊತೆ ಮಾತನಾಡಿದ್ದೇನೆ. ಸಮಾಧಾನವಾಗಿ ಇರಿ ಅಂತ ಹೇಳಿದ್ದೇನೆ. ಏಕೆಂದರೆ ಕೋಲಾರಕ್ಕೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಆದರೂ ಎಡಗೈ ಅವರಿಗೆ ಸಿಗುತ್ತೆ ಅಂತ ಭಯಪಟ್ಟಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.