ಯಡಿಯೂರಪ್ಪನವರನ್ನು ಭೇಟಿಯಾಗಿದ್ಯಾಕೆ? ಕೊನೆಗೂ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

By Suvarna NewsFirst Published Sep 11, 2020, 7:32 PM IST
Highlights

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಕಾರಣ ಬಹಿರಂಗವಾಗಿದೆ.

ಬೆಂಗಳೂರು, (ಸೆ.11): ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದ್ದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಭೇಟಿಗೆ ಅಸಲಿ ಕಾರಣ ತಿಳಿದುಬಂದಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ತಮ್ಮ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಹೊರಗೆ ಕಳುಹಿಸಿ ಸುಮಾರು 25ರಿಂದ 35 ನಿಮಿಷಗಳ ಕಾಲ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿರುವುದು ರಾಜಕೀಯ ವಲದಯಲ್ಲಿ ಸಂಚಲನ ಮೂಡಿಸಿದೆ.

ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಇಂದು (ಶುಕ್ರವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದು,  ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಆ ಕುತೂಹಲಕ್ಕೆ ಸ್ವತಃ ಕುಮಾರಸ್ವಾಮಿ ಅವರೇ ತೆರೆ ಎಳೆದಿದ್ದಾರೆ.

ಕುಮಾರಸ್ವಾಮಿ ಸ್ಪಷ್ಟನೆ

ನಾನು ಸಿಎಂ ಆಗಿದ್ದಾಗ ಅನುದಾನ ಕೊಟ್ಟಿದ್ದೆ. ಅದು ಬಿಡುಗಡೆ ಆಗಿರಲಿಲ್ಲ. ಅದರ ಬಗ್ಗೆ ಮನವಿ ಮಾಡಲು ಬಂದಿದ್ದೆ. ಇನ್ನು ಶಾಸಕರ ಅನುದಾನದಲ್ಲೂ ತಾರತಮ್ಯವಾಗುತ್ತಿದ್ದು, ಇದರ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಧ್ಯಮಗಳ ಮುಂದೆ ಹೇಳಿದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆಯೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಪೀಣ್ಯ ಕೈಗಾರಿಕಾ ಪ್ರದೇಶ ನಮ್ಮ ಕ್ಷೇತ್ರಕ್ಕೆ ಬರಲಿದ್ದು, ಅಲ್ಲೂ ಕೂಡ ಮಳೆಯಿಂದ ಸಮಸ್ಯೆಯಾಗಿದೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಎಚ್‍ಡಿಕೆ ಅವರೊಂದಿಗೆ ಇಲ್ಲಿಗೆ ಬಂದಿದ್ದಾಗಿ ತಿಳಿಸಿದರು.

click me!