ಸಿದ್ದರಾಮಯ್ಯ ಸರ್ಕಾರ ತಿರಸ್ಕರಿಸಿದ್ದ ಯೋಜನೆಗೆ ಕುಮಾರಸ್ವಾಮಿ ಗ್ರೀನ್ ಸಿಗ್ನಲ್!

By Web DeskFirst Published Feb 6, 2019, 8:52 PM IST
Highlights

ಕಳೆದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿರಸ್ಕರಿಸಿದ್ದ ಯೋಜನೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅನುಮೋದನೆ ನೀಡಿದ್ದು, ಮೈತ್ರಿ ನಡುವೆ ಮತ್ತೊಂದು ಜಟಾಪಟಿಗೆ ಕಾರಣವಾಗಿದೆ. 

ಬೆಂಗಳೂರು, [ಫೆ. 6]: ಕಳೆದ ಸಿದ್ದರಾಮಯ್ಯ ಸರ್ಕಾರದ 'ರೈತ ಬೆಳಕು' ಯೋಜನೆಗೆ ಎಳ್ಳುನೀರು ಬಿಟ್ಟಿದ್ದ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ, ಇದೀಗ ಸಿದ್ದು ವಿರೋಧಿಸಿದ್ದ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. 

ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿರಸ್ಕರಿಸಿದ್ದ ಕಾವೇರಿ ನದಿಗೆ ಅಡ್ಡಲಾಗಿ ಬಸವೇಶ್ವರ ಸಣ್ಣ ಹೈಡಲ್ ಯೋಜನೆಗೆ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ 24.75 ಮೆಗಾ ವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗಲಿದೆ.

 #BREAKING ಸಿದ್ದರಾಮಯ್ಯ ಮಹತ್ವಾಕಾಂಕ್ಷೆ ಯೋಜನೆ ಕೈಬಿಟ್ಟ ಎಚ್‌ಡಿಕೆ!

ಈಗಿರುವ 24.75 ಮೆಗಾ ವ್ಯಾಟ್ ಸಾಮರ್ಥ್ಯದ ರಂಗನಾಥ ಸ್ವಾಮಿ ಮಿನಿ ಹೈಡಲ್ ಯೋಜನೆಯ ಪಕ್ಕದಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಶಿವನಸಮುದ್ರದಲ್ಲಿ ತಲೆಯೆತ್ತಲಿದ್ದು, ಒಟ್ಟಾಗಿ 49.5 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವನ್ನು ಹೊಂದಲಿದೆ.

ಯೋಜನೆಯಲ್ಲಿ ಅಕ್ರಮ ನಡೆದಿದೆ ಮತ್ತು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರೋಧಿಸಿತ್ತು. ಈ ಪ್ರದೇಶದಲ್ಲಿ 8 ಮಿನಿ ಹೈಡಲ್ ಪ್ರಾಜೆಕ್ಟ್ ಗಳಿದ್ದು ಅದರಿಂದ ನದಿಯ ಸುರಕ್ಷತೆಗೆ ಧಕ್ಕೆಯುಂಟಾಗಲಿದೆ ಎಂದು ಹೈಕೋರ್ಟ್ ನೇಮಿಸಿದ್ದ ಪರಿಸರ ತಜ್ಞರ ಸಮಿತಿ ವರದಿ ನೀಡಿತ್ತು. ಈ ಹಿನ್ನಲೆಯಲ್ಲಿ ಯೋಜನೆಯನ್ನು ಹಿಂದಿನ ಸರ್ಕಾರ ಕೈಬಿಟ್ಟಿತ್ತು.

ಸಿದ್ದರಾಮಯ್ಯ ಅವರು ಮಹತ್ವಕಾಂಕ್ಷಿ ಯೋಜನೆ 'ರೈತ ಬೆಳಕು' ಯೋಜನೆಯನ್ನು ಕುಮರಸ್ವಾಮಿ ಸರ್ಕಾರ ಕೈಬಿಟ್ಟಿದೆ. ಇದೀಗ ಸಿದ್ದರಾಮಯ್ಯ ತಿರಸ್ಕರಿಸಿದ್ದ ಯೋಜನೆಗೆ ಅನುಮೋದನೆ ನೀಡಿದ್ದು, ಮೈತ್ರಿ ನಡುವೆ ಜಟಾಪಟಿಗೆ ಕಾರಣವಾಗಿದೆ. 

click me!