'ಬಿಜೆಪಿಯನ್ನು ಟೀಕಿಸುತ್ತಿರುವ ವಿಶ್ವನಾಥ್ ಯಾವ ಪಕ್ಷಕ್ಕೆ ಹೋಗ್ತಾರೆ'?

By Suvarna News  |  First Published Jan 31, 2021, 2:25 PM IST

ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಯಿಂದ ತಮ್ಮ ನಾಯಕ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಸಿಎಂ ಪ್ರತಿಕ್ರಿಯಿಸಿ ಹಳ್ಳಿ ಹಕ್ಕಿಗೆ ಟಾಂಗ್ ನೀಡಿದ್ದಾರೆ. 
 


ಬಾಗಲಕೋಟೆ, (ಜ.31): ಕಾಂಗ್ರೆಸ್, ಜೆಡಿಎಸ್ ಮುಗಿಯಿತು. ಈಗ ಬಿಜೆಪಿ ನಾಯಕರ ವಿರುದ್ಧ ತಿರುಗಿಬಿದ್ದಿರುವ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಇನ್ನು ಯಾವ ಪಕ್ಷ ಸೇರುತ್ತಾರೊ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ವಿಧಾನ ಪರಿಷತ್ ಉಪಸಭಾಪತಿ ಆಯ್ಕೆ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಹೊಂದಾಣಿಕೆ ವಿಚಾರದಲ್ಲಿ ಎಚ್‌. ವಿಶ್ವನಾಥ್  ಅಸಮಾಧಾನ ಹೊರಹಾಕಿದ್ದಾರೆ.

Tap to resize

Latest Videos

ಜೆಡಿಎಸ್-ಬಿಜೆಪಿ ಮೈತ್ರಿ: ಪಕ್ಷದಲ್ಲಿ ಶುರುವಾಯ್ತು ಅಸಮಾಧಾನ..!

ಇನ್ನು ಈ ಬಗ್ಗೆ ಇಂದು (ಭಾನುವಾರ) ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮೂರು ಪಕ್ಷಗಳು ಮುಗಿಯಿತು. ಇನ್ನೊಂದು ಪಕ್ಷ ಇದ್ದಿದ್ದರೆ ಇಷ್ಟೊತ್ತಿಗೆ ಕರ್ಚೀಫ್ ಇಲ್ಲವೇ ಟವೆಲ್ ಹಾಕಿರುತ್ತಿದ್ದರು. ಕಾದು ನೋಡೋಣ ವಿಶ್ವನಾಥ್ ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ಕುಮಾರಸ್ವಾಮಿ  ಛೇಡಿಸಿದರು. 

ಸಾಹಿತಿ ಕೋಟಾದಲ್ಲಿ ವಿಧಾನಪರಿಷತ್ ಸದಸ್ಯರಾಗಿರುವ ಅವರು ಸಾಹಿತ್ಯದ ಪರಿಭಾಷೆಯಲ್ಲಿಯೇ ವಿರೋಧಿಗಳನ್ನು ಟೀಕಿಸುತ್ತಾರೆ. ಅವರ ವಿರುದ್ಧ ಹೆಚ್ಚು ಮಾತಾಡೊಲ್ಲ ಎಂದರು.

click me!