
ಬೆಂಗಳೂರು, (ಸೆ.20): ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿ ಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿ ಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಜೆಡಿಎಸ್ ಪಕ್ಷ ಅವಕಾಶವಾದಿಗಳ ಪಕ್ಷ ಎಂಬ ವಿಪಕ್ಷ ನಾಯಕಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ ಎಂದು ತಿರುಗೇಟು ನೀಡಿದ್ದಾರೆ.
60 ನಾಯಕರು ಕಾಂಗ್ರೆಸ್ ಸೇರಲು ಅರ್ಜಿ: ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಬರೆದ ಜೆಡಿಎಸ್ ನಾಯಕ
ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಕುಟುಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.