* ನಾಲ್ಕು ದಿನ ಜೆಡಿಎಸ್ ಕಾರ್ಯಗಾರಕ್ಕೆ ಕುಮಾರಸ್ವಾಮಿ ಚಾಲನೆ
* ರಾಮನಗರದ ಕೇತಗಾನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಾಗಾ
* ಈ ವೇಳೆ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ
ರಾಮನಗರ, (ಸೆ.27): ವಿಧಾನಸಭೆ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಬಾಕಿ ಇದೆ. ಆದ್ರೆ, ಜೆಡಿಎಸ್ (JDS) ಈಗಿಂದಲೇ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ರಾಮನಗರದ ಕೇತಗಾನಹಳ್ಳಿಯಲ್ಲಿ 4 ದಿನಗಳ ಜೆಡಿಎಸ್ ಕಾರ್ಯಾಗಾರ ಹಮ್ಮಿಕೊಂಡಿದ್ದು, ಇಂದು (ಸೆ,27 ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮೊದಲ ದಿನದ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಎಲ್ಲಿದ್ದೆ, ಎಲ್ಲಿಂದ ಬಂದೆ ಎಂದು ಅವರೇ ಹೇಳಲಿ: ಎಚ್‌ಡಿಕೆ ತೀವ್ರ ಆಕ್ರೋಶ
ಮಾತನಾಡುವವರು ಮಾತನಾಡಲಿ, 2023ರ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ ವಿರುದ್ಧ ಕಿಡಿಕಾರಿದರು.
ಜೆಡಿಎಸ್ ನಿಂದಲೇ ಬೆಳೆದು ಹೋದವರೊಬ್ಬರು ನಮ್ಮ ಪಕ್ಷದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವೇನೆಂಬುದನ್ನು ತೋರಿಸುತ್ತೇವೆ ಎಂದು ತಿರುಗೇಟು ನೀಡಿದರು.
ಕಳೆದ ಒಂದೂವರೆ ವರ್ಷದಿಂದ ಆಕ್ಟಿವಿಟೀಸ್ ಇರಲಿಲ್ಲ. ಇಂದಿನಿಂದ ನಾಲ್ಕು ದಿನಗಳ ಕಾಲ ಕಾರ್ಯಗಾರ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳು ಯಾವ ರೀತಿ ಜನರನ್ನು ತಲುಪಬೇಕು ಎಂಬುದು ನಾಯಕತ್ವ, ಶಿಸ್ತು ಬೆಳೆಸಲು ತರಬೇತಿ ನೀಡಲಾಗುತ್ತದೆ. ಅವರು ನಮ್ಮ ನಿರೀಕ್ಷೆಯಂತೆ ಕೆಲಸ ಮಾಡಬೇಕು. ಆತ್ಮೀಯತೆ ವ್ಯಾಮೋಹ ಅವರ ಮೇಲೆ ಇಲ್ಲ. ಅವರು ಕಾರ್ಯದಕ್ಷತೆಯಿಂದ ಇರಬೇಕು. ಇಲ್ಲದೇ ಹೋದ್ರೆ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ ಕೆಲಸವನ್ನೂ ಮಾಡ್ತೀವಿ ಎಂದರು.