
ಬೆಂಗಳೂರು, (ಏ.22): ಕೇಂದ್ರ ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಎಂದು ಕಿಡಿಕಾರಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿ ತಮ್ಮ ಆಕ್ರೋಶವನ್ನ ಹೊರಹಾಕಿರುವ ಕುಮಾರಸ್ವಾಮಿ, ಕೊರೋನಾ ವೈರಸ್್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ, ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂಧರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲಾ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತನ್ನ ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ, ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿಗರಿಗೆ ಗುಡ್ ನ್ಯೂಸ್: ಮೆಟ್ರೋ 2A, 2B ಹಂತದ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ
ಕೊರೊನಾ ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ! ಎಂದು ವಾಗ್ದಾಳಿ ನಡೆಸಿದರು.
ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ.
ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ?, ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ?. ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು ಎಂದು ಹೆಚ್.ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.