Siddu VS HDK:ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ ಕುಮಾರಸ್ವಾಮಿ

Published : Dec 22, 2021, 03:54 PM IST
Siddu VS HDK:ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ ಕುಮಾರಸ್ವಾಮಿ

ಸಾರಾಂಶ

* ಸಿದ್ದರಾಮಯ್ಯ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ * ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಮೇಲೆ ಗಂಭೀರ ಆರೋಪ ಮಾಡಿದ ಎಚ್‌ಡಿಕೆ * ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ ಎಂದು ಕುಮಾರಣ್ಣ

ಬೆಂಗಳೂರು, (ಡಿ.22):  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರನ್ನ ಹಿಟ್ಲರ್ ಅಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್ʼಗೆ ಹೋಲಿಕೆ ಮಾಡಿ ತಿರುಗೇಟು ಕೊಟ್ಟಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್  (Tweet) ಮಾಡಿರುವ ಕುಮಾರಸ್ವಾಮಿ,   ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ( Operation Kamala ) ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ( Operation Hasta ) ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Karnataka Politics: ಜೆಡಿಎಸ್ ಮುಳುಗುವ ಹಡಗು ಎಂದ ಸಿದ್ದುಗೆ ಕುಮಾರಸ್ವಾಮಿ ಟಾಂಗ್‌

ಜೆಡಿಎಸ್ ( JDS) ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ ಎಂದು ಕುಮಾರಸ್ವಾಮಿ ( HD Kumaraswamy) ಟ್ವಿಟ್ಟರ್‌ನಲ್ಲಿ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ. ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ. ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ"ಎಂದು ಸಿದ್ದರಾಮಯ್ಯನವರ ವಿರುದ್ದ ವಾಕ್ ಪ್ರಹಾರವನ್ನು ಕುಮಾರಸ್ವಾಮಿ ನಡೆಸಿದ್ದಾರೆ.

ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ. ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ದ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ ಎಂದು ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ