ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತೆ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು, (ಫೆ.12): ಸವಾಲು ಸ್ವೀಕರಿಸಲಾಗದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದರೂ ಈತನಕ ಸವಾಲು ಸ್ವೀಕರಿಸಿಲ್ಲ ಎಂದು ಎಂದಿದ್ದಾರೆ.
ಬೈ ಎಲೆಕ್ಷನ್‌ನಿಂದ JDS ದೂರ ಸರಿದ ಗುಟ್ಟು ಹೇಳಿದ ಸಿದ್ದರಾಮಯ್ಯ!
ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್‌ಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪ ಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ? ಎಂದು ಪ್ರಶ್ನಿಸಿದ್ದಾರೆ.
ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?
2/6
ಜೆಡಿಎಸ್ ಚುನಾವಣೆ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್‌ನವರಾಗಿದ್ದರು ಎಂದು ಹೇಳಿದ್ದಾರೆ.
ಉಪ ಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ.
ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ.
4/6
ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ.
ಒಂದು ವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ. ಅಲ್ಲಿಯವರೆಗೆ ಅವರು ತಾಳಲಿ ಎಂದು ತಿಳಿಸಿದ್ದಾರೆ.
ಜೆಡಿಎಸ್ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಜೆಡಿಎಸ್‌ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ ಎಂದು ಟ್ವೀಟ್ ಬಾಣ ಬಿಟ್ಟಿದ್ದಾರೆ.