ವಾಹನ ಚಾಲಕರಿಂದ ದಂಡ ವಸೂಲಿ, ಸರ್ಕಾರದ ವಿರುದ್ಧ ಕುಮಾರಸ್ವಾಮಿ ರೋಷಾವೇಷ

By Suvarna News  |  First Published Oct 20, 2020, 5:27 PM IST

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ನಡೆ ವಿರುದ್ಧ ಕೆಂಡಾಮಂಡಲರಾಗಿದ್ದು, ಬಿಎಸ್‌ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಬೆಂಗಳೂರು, (ಅ.20): ಕೊರೋನಾ ಲಾಕ್ ಡೌನ್ ನಿಂದ ಸಂಕಟಕ್ಕೆ ಸಿಲುಕಿದ್ದ ಚಾಲಕರಿಗೆ 5000 ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರಾಜ್ಯ ಸರ್ಕಾರ ಮಾತಿಗೆ ತಪ್ಪಿದೆ. ಇದರ ಬೆನ್ನಲ್ಲೇ ಈಗ ಒಂದು ಹೊತ್ತಿನ ಊಟಕ್ಕಾಗಿ ಪರದಾಡುತ್ತಿರುವ ಆಟೋ ಚಾಲಕರು, ಕ್ಯಾಬ್ ಚಾಲಕರಿಂದ ದಂಡ ವಸೂಲಿ ನೆಪದಲ್ಲಿ ಅವರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಳೆದ 7 ತಿಂಗಳಿಂದ ಸಂಪಾದನೆ ಇಲ್ಲದೆ ಹತಾಶರಾಗಿರುವ ರಿಕ್ಷಾ, ಕ್ಯಾಬ್ ಚಾಲಕರು ಈಗಷ್ಟೇ ರಸ್ತೆಗಿಳಿದಿದ್ದಾರೆ. ಆದರೆ ಪ್ರಯಾಣಿಕರಿಲ್ಲದೇ ಊಟಕ್ಕಾಗಿ ಪರದಾಡುತ್ತಾ ಮೂರು ಕಾಸು ಸಂಪಾದನೆಗೆ ಕಷ್ಟಪಡುತ್ತಿದ್ದಾರೆ. ಆದರೆ ಅವರಿಂದ ದಂಡದ ರೂಪದಲ್ಲಿ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Tap to resize

Latest Videos

ರಾಜಕೀಯ ಬದ್ಧ ವೈರಿ ಇದ್ದಲ್ಲಿಯೇ ಹೋಗಿ ಭೇಟಿಯಾದ ಕುಮಾರಸ್ವಾಮಿ, ರೇವಣ್ಣ

ಸರ್ಕಾರ ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ತಕ್ಷಣ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ ಚಾಲಕರಿಗೆ ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ.
ಎಗ್ಗಿಲ್ಲದೆ ದಂಡ ವಸೂಲಿ ಮಾಡುವ ಪೋಲಿಸರ ಕ್ರಮದಿಂದ ಚಾಲಕರು ನಲುಗಿ ಹೋಗಿದ್ದಾರೆ. ಇಂತಹ ಕಡು ಕಷ್ಟಕಾಲದಲ್ಲಿ ಸರ್ಕಾರ ಮಾನವೀಯತೆಯನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸುತ್ತೇನೆ.
8/8

— H D Kumaraswamy (@hd_kumaraswamy)

ಜಾಗೃತಿ ಮೂಡಿಸಬೇಕಾದ ಪೊಲೀಸರು ವಾಹನ ತಪಾಸಣೆ ಹೆಸರಲ್ಲಿ ಬಡ ಚಾಲಕರನ್ನು ಸುಲಿಯುತ್ತಿರುವ ನಿರ್ದಾಕ್ಷಿಣ್ಯ ವರ್ತನೆ ಸರಿಯಲ್ಲ. ದಾಖಲೆಗಳನ್ನು ತೋರಿಸಿದರೂ ಚಾಲಕರಿಂದ ದಂಡ ವಸೂಲಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಪೊಲೀಸರಿಗೆ ದಂಡ ವಸೂಲಿ ಟಾರ್ಗೆಟ್ ನೀಡಿರುವ ಕ್ರಮ ಶೋಭೆ ತರುವುದಿಲ್ಲ ಎಂದು ಗುಡುಗಿದ್ದಾರೆ.

ಚಾಲಕರನ್ನು ಸುಲಿಯುವ ಇಂತಹ ಕ್ರಮವನ್ನು ಸರ್ಕಾರ ನಿಲ್ಲಿಸಬೇಕು. ಬಡ ಚಾಲಕರ ಹಿಡಿಶಾಪ ಸರ್ಕಾರಕ್ಕೆ ತಗುಲುವ ಮುನ್ನವೇ ಸರ್ಕಾರ ಸರ್ವಾಧಿಕಾರದ ಈ ದರ್ಪವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಎಲ್ಲ ದಾಖಲಾತಿಗಳನ್ನು ತೋರಿಸಿದರೂ ಒಂದಲ್ಲಾ ಒಂದು ಕಾನೂನು ತಗಾದೆ ತೆಗೆದು ಚಾಲಕರನ್ನು ಹಗಲು ದರೋಡೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರಿಗೆ ದಂಡ ವಸೂಲಿಗೆ ಟಾರ್ಗೆಟ್ ನೀಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ.
6/8

— H D Kumaraswamy (@hd_kumaraswamy)
click me!