ಮಂಡ್ಯದಲ್ಲಿ ಸೆಮಿಕಂಡಕ್ಟರ್ ಘಟಕಕ್ಕೆ ಜಾಗ ಕೊಡಿ: ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಪತ್ರ

Published : Dec 24, 2025, 05:38 AM IST
HD Kumaraswamy

ಸಾರಾಂಶ

ನಿರುದ್ಯೋಗ ಯುವಕ - ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಲ್ಲಿ ಸೆಮಿ ಕಂಡಕ್ಟರ್ ಸ್ಯಾಬ್ರಿಕೇಶನ್ ಘಟಕ ಸ್ಥಾಪಿಸಲು ಉ್ದದೇಶಿಸಿದ್ದು, ಅಗತ್ಯ ಜಾಗ ಕಲ್ಪಿಸುವಂತೆ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮಂಡ್ಯ (ಡಿ.24): ಜಿಲ್ಲೆಯ ನಿರುದ್ಯೋಗ ಯುವಕ - ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಲ್ಲಿ ಸೆಮಿ ಕಂಡಕ್ಟರ್ ಸ್ಯಾಬ್ರಿಕೇಶನ್ ಘಟಕ ಸ್ಥಾಪಿಸಲು ಉ್ದದೇಶಿಸಿದ್ದು, ಅಗತ್ಯ ಜಾಗ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಅಕ್ಟೋಬರ್ 31 ರಂದೇ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಉತ್ತರ ನೀಡಿಲ್ಲ. ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ಎಚ್‌ಡಿಕೆ ಆಲೋಚನೆಗೆ ರಾಜ್ಯ ಸರ್ಕಾರದ ಧೋರಣೆಯಿಂದ ನಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ ಅಮೇರಿಕಾ ಮೂಲದ ಪ್ರತಿಷ್ಠಿತ ತಂತ್ರಜ್ಞಾನ ಉದ್ಯಮವಾದ ಸ್ಯಾನ್ಸನ್ ಗ್ರೂಪ್‌ ಕಂಪನಿ ಸ್ಥಾಪಿಸಲು ಮಾತುಕತೆ ನಡೆಸಿರುವ ಕೇಂದ್ರ ಸಚಿವ ಎಚ್‌ಡಿಕೆ ಅವರು, ಭಾರತದಲ್ಲಿ ಸಿಲಿಕಾನ್ ಮತ್ತು ಸಿಲಿಕಾನ್ ಕಾರ್ಬೈಟ್ (SIC) ಉತ್ಪಾದನಾ ಸೌಲಭ್ಯಕ್ಕಾಗಿ ಎಂಡ್ ಟು ಎಂಡ್ ಸೆಮಿ ಕಂಡಕ್ಟರ್ ಸ್ಯಾಬ್ರಿಕೇಶನ್ ಘಟಕವನ್ನು ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ.

ಈ ಘಟನೆ ಸ್ಥಾಪನೆಯಿಂದ ಸುಮಾರು 30 ರಿಂದ 40 ಸಾವಿರದವರೆಗೆ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಒದಗಿಸಬಹುದಾಗಿದೆ. ಸಂಸ್ಥೆಗೆ ಸರ್ಕಾರದಿಂದ ಮಂಡ್ಯ ಜಿಲ್ಲೆಯ ಸುತ್ತಮುತ್ತ ಸುಮಾರು 100 ಎಕರೆ ಬಯಲು ಭೂಮಿಗೆ ಪ್ರಾಥಮಿಕ ಅವಶ್ಯಕತೆ ಇದೆ. ಸ್ಥಾನ್ಸನ್ ಗ್ರೂಪ್‌ ಕಂಪನಿಯ ಬೇಡಿಕೆಯಾಗಿದೆ. ಇದಕ್ಕಾಗಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅಗತ್ಯ ಜಾಗ ನೀಡುವಂತೆ ಮನವಿ ಮಾಡಿದ್ದಾರೆ.

ಸ್ಯಾನ್ಸನ್ ಗ್ರೂಪ್ ಜೊತೆ ಮಾತುಕತೆ

ಮ್ಯಾಕ್ರೋ ಎಲೆಕ್ಟ್ರಾನಿಕ್ ವಲಯದಲ್ಲಿ ಸಿಲಿಕಾನ್ ಮತ್ತು ಸಿಲಿಕಾನ್ ಕಾರ್ಬೈಟ್ ಉತ್ಪಾದನೆ, ಸೌರಫಲಕ ಬ್ಯಾಟರಿಗಳು, ಡಯೋಡ್‌ಗಳು (MOUSFIT) ಇತ್ಯಾದಿಗಳನ್ನು ಸಿದ್ದಪಡಿಸಿ ಉತ್ಪನ್ನಗಳು ಮಾರುಕಟ್ಟೆಯನ್ನು ರಾಜ್ಯಕ್ಕೆ ತಂದು ಜಿಲ್ಲೆಯಲ್ಲಿ ಸ್ಥಾಪಿಸಲು ಮುಂದಾಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಸರ್ಕಾರ, ಸಿಎಂ, ಕೈಗಾರಿಕಾ ಸಚಿವರು ಹಾಗೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಅಗತ್ಯ ಜಾಗ ನೀಡಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದ್ವೇಷ ಭಾಷಣ ತಡೆ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧವಲ್ಲ: ಬಿ.ಕೆ.ಹರಿಪ್ರಸಾದ್‌ ಲೇಖನ
ಸಂಕ್ರಮಣ ನಂತ್ರ ಸಿಎಂ ಬದಲು ಆಗ್ತಾರೆ, ಆಗಲ್ಲ ಎರಡೂ ಇದೆ: ಸಚಿವ ಸತೀಶ್‌ ಜಾರಕಿಹೊಳಿ