ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅವರನ್ನ ಭೇಟಿ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಬೆಂಗಳೂರು, (ಡಿ.07): ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು (ಸೋಮವಾರ) ಭೇಟಿ ಮಾಡಿದ್ದು, ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದೆ.
undefined
ಸಿಎಂ ಇಬ್ರಾಹಿಂ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಕುಮಾರಸ್ವಾಮಿ, ಇಬ್ರಾಹಿಂ ಗೆ ಜೆಡಿಎಸ್ ಗೆ ವಾಪಸ್ ಬರುವಂತೆ ಮನವಿ ಮಾಡಿದ್ದಾರೆ.
ಅಸಮಾಧಾನ ಸ್ಫೋಟ: ಇಬ್ಬರು ಶಾಸಕರ ರಾಜೀನಾಮೆ ಪ್ರಸ್ತಾಪದಿಂದ ಸಿಎಂ ಕಕ್ಕಾಬಿಕ್ಕಿ
ಈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ, ರಾಜ್ಯಾಧ್ಯಂತ ಪ್ರವಾಸ ಮಾಡುತ್ತೇನೆ. ಬಳಿಕ ಅಭಿಮಾನಿಗಳ ಅಭಿಪ್ರಯಾದಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಜನತಾ ಪರಿವಾರದಲ್ಲಿದ್ದ ಸಿಎಂ ಇಬ್ರಾಹಿಂ ನಂತರ ಕಾಂಗ್ರೆಸ್ ಸೇರಿದ್ದರು. ಆದ್ರೆ, ಅದ್ಯಾಕೋ ಏನೋ ಇತ್ತೀಚೆಗೆ ಇಬ್ರಾಹಿಂ ಅವರು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ.
ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಆಹ್ವಾನ ನೀಡಿ ಜೆಡಿಎಸ್‌ಗೆ ಆಹ್ವಾನ ಮಾಡಿರುವುದಕ್ಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳನ್ನ ಸೆಳೆಯಲು ಕುಮಾರಸ್ವಾಮಿ ಅವರು ಇಬ್ರಾಹಿಂ ಅವರಿಗೆ ಗಾಳ ಹಾಕಿದ್ದಾರೆ. ಇನ್ನು ಇಬ್ರಾಹಿಂ ಜೆಡಿಎಸ್ ಗೆ ಸೇರ್ಪಡೆ ಆಗುತ್ತಾರಾ ಎನ್ನುವುದನ್ನ ಕಾದುನೋಡಬೇಕಿದೆ.