ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬೆನ್ನುಬಿದ್ದಿರುವ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಇದೀಗ ಅವರ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ರಾಯಚೂರು, (ಡಿ.02): 1 ತಿಂಗಳಲ್ಲಿ ಎಚ್ ಡಿ ಕುಮಾರಸ್ವಾಮಿಯವರ ಭೂಹಗರಣ ಸಂಪೂರ್ಣ ದಾಖಲೆ ಬಿಚ್ಚಿಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ.
ರಾಯಚೂರಿನಲ್ಲಿ ಇಂದು (ಬುಧವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗರದ ಕೇತಗಾನಹಳ್ಳಿ ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಬಾಂಬ್ ಸಿಡಿಸಿದರು.
undefined
ರಾಮನಗರ : ಹಿರೇಮಠ್ ಮೇಲೆ ಹಲ್ಲೆಗೆ ಯತ್ನ
ಮಾದೇಗೌಡರು ಎಚ್‌ಡಿಕೆ ಭೂ ಕಬಳಿಕೆ ಬಗ್ಗೆ ಹೇಳಿದ್ದರು. ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರು.
ಕಾಫಿ ಡೇ ಹಗರಣ ಕುರಿತು ಸಿಬಿಐ ನಿವೃತ್ತ ಡಿಐಜಿ ಅಶೋಕ್ ಮಲ್ಹೋತ್ರ ವರದಿ ನೀಡಿದ್ದಾರೆ. ಆದರೆ, ವರದಿಯಲ್ಲಿ ಅನೇಕ ಭ್ರಷ್ಟರ ,ಭ್ರಷ್ಟತನದ ಉಲ್ಲೇಖವಿಲ್ಲ. ಡಿಕೆಶಿ, ಮಾಳವಿಕ ಹೆಗಡೆ ಸೇರಿ ಅನೇಕರು ಸಾರ್ವಜನಿಕ ಹಣ ಲೂಟಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಹಗರಣದ ಬಗ್ಗೆ ಗಂಭೀರವಾದ ತನಿಖೆ ನಡೆದಿಲ್ಲ. ನಿವೃತ್ತ ರಾಜ್ಯ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಕಾಫೀ ಡೇ ಚೆರ್ಮನ್ ಆಗಿದ್ದಾರೆ. ರಂಗನಾಥ್ ಎಷ್ಟು ಪ್ರಮಾಣಿಕರೋ ಗೊತ್ತಿಲ್ಲ, ತನಿಖೆ ಸರಿಯಾಗಿ ನಡೆದಲ್ಲಿ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.