* ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಚರ್ಚೆ
* ಲಾಕ್‌ಡೌನ್ ವಿಸ್ತರಣೆಗೆ ಓಕೆ ಎಂದ ಕೆಲವು ಸಚಿವರು
* ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ
ಬೆಂಗಳೂರು, (ಮೇ.17): ಕರ್ನಾಟಕದಲ್ಲಿ ಕೊರೋನಾ 2ನೇ ಸೋಂಕು ತಡೆಯಲು ಲಾಕ್‌ಡೌನ್ ಘೋಷಣೆ ಮಾಡಲಾಗಿದ್ದು, ಮೇ 24ರ ತನಕ ಜಾರಿಯಲ್ಲಿರಲಿದೆ.
ಮೇ 24ರ ಬಳಿಕ ರಾಜ್ಯದಲ್ಲಿ ಈಗ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಕೆಲವು ಸಚಿವರು ವಿಸ್ತರಣೆ ಬಗ್ಗೆ ಪರವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
undefined
ಇನ್ನು ಈ ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರಕ್ಕೆ ಸಲಹೆಯನ್ನ ಕೊಟ್ಟಿದ್ದಾರೆ.
ಬ್ಲ್ಯಾಕ್ ಫಂಗಸ್‌ಗೂ ಔಷಧಿ ಕೊರತೆ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ
ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್ ವಿಸ್ತರಿಸುವುದೇ ಆದರೆ, ಅದು ಜನಹಿತದ ಲಾಕ್‌ಡೌನ್ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ಜನಹಿತದ ಲಾಕ್‌ಡೌನ್ ಕಲ್ಪನೆಯೇ ಆಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್' ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ 'ಜನಹಿತದ ಲಾಕ್‌ಡೌನ್' ಕಲ್ಪನೆಯೇ ಆಗಿತ್ತು.
1/4
ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು ಎಂದು ಒತ್ತಾಯಿಸಿದ್ದಾರೆ.
ಲಾಕ್‌ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ ಈ ಲಾಕ್‌ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದಿದ್ದಾರೆ.