
ಬೆಂಗಳೂರು, (ಆ.28) : ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗಲಭೆ ನಡೆಸಿದ ಮರಾಠಿ ಭಾಷಿಗರ ವಿರುದ್ಧ ಕಿಡಿಕಾರಿದ್ದಾರೆ.
"
ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಯಣ್ಣ ವಿಚಾರದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಯತ್ನ: ಹೀಗೊಂದು ಸ್ಫೋಟಕ ಹೇಳಿಕೆ
ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.
ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದರು.
ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ - ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.