
ಬೆಂಗಳೂರು, (ಅ. 06): ಆರ್‌ಎಸ್‌ಎಸ್ ವಿರದ್ಧ ಹೇಳಿಕೆ ಬೆನ್ನಲ್ಲೇ ಇದೀಗ ಅದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಮಜಾಯಿಷಿ ಕೊಟ್ಟಿದ್ದಾರೆ.
ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೋರೋನ ಲಾಕ್ ಡೌನ್ ವೇಳೆಯಲ್ಲಿ ಹಲವಾರು ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಓದಿದೆ. ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿ ಬರೆಯಲಾಗಿರುವ ಕೆಲ ಅಂಶಗಳನ್ನಷ್ಟೆ ನಾನು ಹೇಳಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಅಲ್ಲಿನ ವ್ಯವಹಾರಗಳ ದರ್ಶನ ಆಗಿದೆ: RSS ಶಾಖೆಗೆ ಬನ್ನಿ ಎಂದ ಸಿಟಿ ರವಿಗೆ ಎಚ್‌ಡಿಕೆತಿರುಗೇಟು
ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪ್ರಸ್ತುತ ದೇಶ ಹೋಗುತ್ತಿರುವ ಹಾದಿ ನೋಡಿದರೆ ಜನರ ಮುಂದೆ ಸತ್ಯ ಇಡುವುದು ಅತ್ಯಂತ ಅಗತ್ಯವೆಂದು ನನಗೆ ಅನಿಸಿತು. ವಾಸ್ತವವಾಗಿ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿಲ್ಲ. ಸತ್ಯ ಮುಚ್ಚಿಟ್ಟರೆ ತಮ್ಮ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರಿಗೆ ಅಪಚಾರ ಮಾಡಿದಂತೆ ಆಗುತ್ತದೆ ಎಂದಿದ್ದಾರೆ.
ಯಾವತ್ತಿದ್ದರೂ ಜನರಿಗೆ ಸತ್ಯ ಗೊತ್ತಾಗಲೇಬೇಕು. ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ. ನನ್ನ ಹೇಳಿಕೆ ಯಾರ ಪರವೂ ಇಲ್ಲ ಅಥವಾ ವಿರೋಧವೂ ಇಲ್ಲ. ಸತ್ಯ ಚರ್ಚೆ ಆಗಬೇಕು ಎಂಬುದು ನನ್ನ ಅಭಿಲಾಷೆ. ನಾನು ಸತ್ಯದ ಪರ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.