Karnataka Politics ಸಿದ್ದರಾಮಯ್ಯ ಭೇಟಿ ಮಾಡಿದ ಮಂಡ್ಯ ಜೆಡಿಎಸ್ ಶಾಸಕ, ಎಚ್‌ಡಿಕೆ ಪ್ರತಿಕ್ರಿಯಿಸಿದ್ದು ಹೀಗೆ

By Suvarna NewsFirst Published Jan 28, 2022, 7:09 PM IST
Highlights

* ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಬಿರುಗಾಳಿ
* ಸಿದ್ದರಾಮಯ್ಯನವರನ್ನ ಭೇಟಿ ಮಾಡಿದ ಜೆಡಿಎಸ್‌ನ ಮತ್ತೋರ್ವ ಶಾಸಕ
* ಕಾಂಗ್ರೆಸ್ ಸೇರ್ತಾರಾ ಮಂಡ್ಯ ಜೆಡಿಎಸ್ ಶಾಸಕ?

ರಾಮನಗರ, (ಜ.28): ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಇದರ ಬೆನ್ನಲ್ಲೇ ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿರುವುದು ಭಾರಿ ಸಂಚಲನ ಮೂಡಿಸಿದೆ. ಜೆಡಿಎಸ್ ಶಾಸಕ ಪುಟ್ಟರಾಜು (CS Puttaraju) ಕಾಂಗ್ರೆಸ್ (Congress) ಸೇರ್ತಾರಾ ಎಂಬ ಸಾಧ್ಯತೆ ದಟ್ಟವಾಗಿದೆ. 

ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದು, ಸಿ.ಎಸ್.ಪುಟ್ಟರಾಜು ಹಾಗೂ ಇತರೆ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಯಾರನ್ನು ಭೇಟಿ ಮಾಡುತ್ತಾರೋ ಅದನ್ನು ಕಟ್ಟಿಕೊಂಡು ನನಗೇನು? ಯಾರು ಯಾರನ್ನ ಬೇಕಾದರೂ ಭೇಟಿ ಮಾಡಬಹುದು, ಚರ್ಚೆ ಮಾಡಬಹುದು. ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನ ಮುಖ್ಯ. ಕಾರ್ಯಕರ್ತರಿದ್ದರೆ ಅಷ್ಟೇ ಪಕ್ಷ ಮತ್ತು ಮುಖಂಡರು ಬೆಳೆಯೋದು ಎಂದು ಸ್ಪಷ್ಟಪಡಿಸಿದರು.

Defection Politics: ಜೆಡಿಎಸ್‌ಗೆ ಗುಡ್‌ಬೈ ಹೇಳ್ತಾರಾ ಶಾಸಕ ಪುಟ್ಟರಾಜು..?

ಕಾರ್ಯಕರ್ತರಿಂದ ಮುಖಂಡರು ಉದ್ಭವ ಆಗುತ್ತಾರೆ. ಬಹಳಷ್ಟು ಜನ ಮುಖಂಡರು ಜೆಡಿಎಸ್ ನಲ್ಲಿ ಬೆಳೆದಿದ್ದಾರೆ. ನಂತರ ಪಕ್ಷವನ್ನ ಬಿಟ್ಟು ಹೋಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರನ್ನು ಬೆಳೆಸುವ ಶಕ್ತಿಯಿದೆ. 2023ಕ್ಕೆ ಜೆಡಿಎಸ್ ಶಕ್ತಿ ಏನೆಂದು ತಿಳಿಯಲಿದೆ ಎಂದು ಮಾಜಿ ಸಿಎಂ ತಿಳಿಸಿದರು.

ಸಿ.ಎಂ.ಇಬ್ರಾಹಿಂ ಅವರು ನಮಗೆ ಹಳಬರು, ದೇವೇಗೌಡರ ಗರಡಿಯಲ್ಲಿ ಬೆಳೆದವರು. ನಾನು ಸಿದ್ದರಾಮಯ್ಯ ಜತೆ ಹೋಗಿ ದೇವೇಗೌಡರನ್ನು ದೂರ ಮಾಡಿಕೊಂಡೆ. ಅವರ ಕೊನೆ ಆಸೆಯಂತೆ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ನಾನು ಜೆಡಿಎಸ್ ಸೇರ್ತೇನೆಂದು ಸ್ವತಃ ಅವರೇ ಹೇಳಿದ್ದಾರೆ. ಅವರಿಗೆ ನಾನು ಸ್ವಾಗತ ಮಾಡುತ್ತೇನೆ ಎಂದರು.

ಡಿಕೆ ಬ್ರದರ್ಸ್‌ ವಿರುದ್ಧ ಕಿಡಿ
ರಾಮನಗರ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ಕುಟುಕಿದರು. 

 ಕುಮಾರಸ್ವಾಮಿಯನ್ನು ರಾಮನಗರದಿಂದ ಖಾಲಿ ಮಾಡಿಸಬೇಕಂತೆ. ನನ್ನನ್ನು ಖಾಲಿ ಮಾಡಿಸಲು ಆಗುತ್ತಾ ಅನ್ನುವುದು ಅವರಿಗೆ ಗೊತ್ತಿಲ್ಲ. ರಾಮನಗರ ಜಿಲ್ಲೆಗೂ ನನಗೂ ಇರುವ ಸಂಬಂಧ ಸಾವಿರಾರು ಬಾರಿ ಹೇಳಿದ್ದೇನೆ. ನನಗೂ ಈ ಜಿಲ್ಲೆಗೂ ತಾಯಿ ಮಗನ ಸಂಬಂಧ ಇದೆ ಎಂದು ಡಿಕೆ ಶಿವಕುಮಾರ್ ಹಾಗೂ ಸುರೇಶ್‌ಗೆ ಟಾಂಗ್ ಕೊಟ್ಟರು.

ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಪಾಲಿಟಿಕ್ಸ್ (Defection Politics) ಬಿರುಗಾಳಿ ಎಬ್ಬಿಸಿದೆ. ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಇವರ ಹೇಳಿಕೆ ಸಂಚಲನ ಹುಟ್ಟು ಹಾಕಿದೆ. ಇದೀಗ ಜೆಡಿಎಸ್ ಶಾಸಕ ಪುಟ್ಟರಾಜು (Puttaraju) ಕಾಂಗ್ರೆಸ್ ಸೇರ್ತಾರಾ ಎಂಬ ಸಾಧ್ಯತೆ ದಟ್ಟವಾಗಿದೆ. 

click me!