ಬೊಮ್ಮಾಯಿ ಮಂಗಳೂರಲ್ಲಿದ್ದಾಗಲೇ 3ನೇ ಕೊಲೆಯಾಗಿದೆ: ಎಚ್‌ಡಿಕೆ ಕಿಡಿ

Published : Jul 30, 2022, 05:05 AM IST
ಬೊಮ್ಮಾಯಿ ಮಂಗಳೂರಲ್ಲಿದ್ದಾಗಲೇ 3ನೇ ಕೊಲೆಯಾಗಿದೆ: ಎಚ್‌ಡಿಕೆ ಕಿಡಿ

ಸಾರಾಂಶ

ಮುಖ್ಯಮಂತ್ರಿಗಳು ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲಕಚ್ಚಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು.30): ಮುಖ್ಯಮಂತ್ರಿಗಳು ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲಕಚ್ಚಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿಗಳು ಅಲ್ಲಿಯೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗಡುಕರನ್ನು ಹೆಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ? ಎಂದು ಪ್ರಶ್ನಿಸಿದ್ದಾರೆ. 

ಕೊಲೆಗೆ ಕೊಲೆಯೇ ಉತ್ತರವಲ್ಲ, ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿಗಳು ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ ಎಂದಿದ್ದಾರೆ. ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ‘ಬುಲ್ಡೋಜರ್‌’ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ ಕರ್ನಾಟಕವನ್ನು ‘ಜಂಗಲ್‌ ರಾಜ್‌’ ಮಾಡುವ ಹುನ್ನಾರವಷ್ಟೇ ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಲ್ಲಿದ್ದಾಗಲೇ ಮೂರನೇ ಕೊಲೆಯಾಗಿದೆ. 

ಹಲವರಿಗೆ ಸಿಎಂ ಆಗುವ ಆಸೆ, ಆದರೆ ಚಾಮುಂಡಿ ಇಚ್ಛೆಯೇ ಬೇರೆ: ಎಚ್‌ಡಿಕೆ

ಅಷ್ಟರಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಶಿಕ್ಷಣ, ಬ್ಯಾಂಕಿಂಗ್‌, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಸರಣಿ ಕೊಲೆಗಳ ಆಡಂಬೋಲವಾಗಿದೆ. ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿ ಕಳಸ. ಇಂತಹ ನೆಲದಲ್ಲಿ 10 ದಿನದಲ್ಲಿ ಮೂರು ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ. ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ‘ಬುಲ್ಡೋಜರ್‌’ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ ಕರ್ನಾಟಕವನ್ನು ‘ಜಂಗಲ್‌ ರಾಜ್‌’ ಮಾಡುವ ಹುನ್ನಾರವಷ್ಟೇ ಎಂದು ಕಿಡಿಕಾರಿದ್ದಾರೆ.

ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ: ಬಸವರಾಜ ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್‌ ಮತ್ತು ಪ್ರವೀಣ್‌ ನಿಟ್ಟಾರು ಹತ್ಯೆಯಾದ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದಾಗ ಸಂವಿಧಾನದತ್ತವಾಗಿ ಸ್ವೀಕರಿಸಿದ ಪ್ರಮಾಣವಚನದ ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ. ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರು ಹೇಳಿದ್ದರು. ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ ‘ಸರ್ವೇ ಜನೋ ಸುಖಿನೋ ಭವಂತು’ ಎನ್ನುವ ತತ್ವವನ್ನೂ ಪಾಲಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರದಿಂದ ಲೂಟಿ: ಎಚ್‌.ಡಿ.ಕುಮಾರಸ್ವಾಮಿ

ಕೊಲೆಗೆ ಕೊಲೆಯೇ ಉತ್ತರವಲ್ಲ, ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿಗಳು ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ. ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ವ್ಯಸನವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧ ಮನಸ್ಸಿಗೆ ಪ್ರಾಶನ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು. ಧರ್ಮ ನಿರಪೇಕ್ಷತೆ ತತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ