ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣದಲ್ಲಿ ಮಹಾನ್ ನಾಯಕನ ಕೈವಾಡ ಎನ್ನುವ ಚರ್ಚೆ ಜೋರಾಗಿದ್ದು, ಒಬ್ಬೊಬ್ಬರು ಒಂದು ರೀತಿಯಲ್ಲಿ ಹೇಳುತ್ತಿದ್ದಾರೆ. ಇದರ ಮಧ್ಯೆ ಆ ಮಹಾನ್ ನಾಯಕನನ್ನು ನೋಡಲು ಕುಮಾರಸ್ವಾಮಿ ಕಾಯುತ್ತಿದ್ದಾರೆ.
ಬೆಂಗಳೂರು, (ಮಾ.16): ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ವಿಚಾರದಲ್ಲಿ 'ಮಹಾನಾಯಕ'ರೊಬ್ಬರ ಕೈವಾಡ ಇದೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಆ ಮಹಾನ್ ನಾಯಕ ಯಾರು ಎಂದು ಗುಸು-ಗುಸು ಎದ್ದಿದೆ. ಇದರ ಮಧ್ಯೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.
ಅಲ್ಲದೇ ಎರಡು ರಾಷ್ಟ್ರೀಯ ಪಕ್ಷಗಳ ರಾಜ್ಯ ಘಟಕದ ಟ್ವೀಟ್‌ನಲ್ಲಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ಹೆಸರನ್ನು ನೇರವಾಗಿ ಉಲ್ಲೇಖಿಸಲಾಗಿದೆ.
ಜಾರಕಿಹೊಳಿ ಸಿ.ಡಿ. ಕೇಸ್: ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ!
ಇದರ ನಡುವೆ ಸಿಡಿ ಪ್ರಕರಣದ ಮಹಾನ್ ನಾಯಕ ಯಾರು ಎಂದು ತಿಳಿಯಲು ನಾನು ಕುತೂಹಲದಿಂದ ಕಾಯ್ತಿದ್ದೀನಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದಲ್ಲಿ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಸಾರ್ವಜನಿಕರಿಗೆ ನಗೆಪಾಟಲಾಗಿ ಪರಿವರ್ತನೆಯಾಗುತ್ತಿದೆ. ಯಾವುದೋ ಲಿಂಕ್ ತಗೆದುಕೊಂಡು ಧಾರಾವಾಹಿ ರೀತಿ ಇದೆ. ಅಂತಿಮವಾಗಿ ಯಾರಿಗೆ ಸುತ್ತಾಕಿಕೊಳ್ಳಲಿದೆ ಎಂದು ಕಾಯುತ್ತಿದ್ದೇನೆ ಎಂದರು.
ರಾಜಕೀಯವಾಗಿ ನಮ್ಮ ಕುಟುಂಬದಲ್ಲಿ ಇಂತಹ ವಿಷಯಗಳ ಬಗ್ಗೆ ದುರುಪಯೋಗ ಮಾಡಿಕೊಂಡು ರಾಜಕೀಯ ಮಾಡಿಲ್ಲ. ಇದು ಅವರ ವೈಯಕ್ತಿಕ ವಿಚಾರಗಳು, ಜನರ ಸಮಸ್ಯೆಗಳ ಬಗ್ಗೆ ದೊಡ್ಡ ಸವಾಲಾಗಿದೆ. ಅದರ ಬಗ್ಗೆ ಗಮನ ಕೊಡಬೇಕೇ ಹೊರತು ಈ ರೀತಿಯ ಘಟನೆಗಳಿಂದ ನಮಗೆ ವೈಯಕ್ತಿಕ ಲಾಭ ಪಡೆಯಬೇಕು ಎಂಬ ಸಣ್ಣತನಕ್ಕೆ ನಾವು ಇಳಿಯುವುದಿಲ್ಲ ಎಂದರು.