ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತೊಂದು ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ.
ಬೆಂಗಳೂರು, (ಮಾ.22): ಸಿ.ಡಿ ವಿಚಾರದ ತನಿಖೆಯನ್ನುಎಸಿಬಿ, ಎಸ್‌ಐಟಿ, ಸರ್ಕಾರ ನೋಡಿಕೊಳ್ಳಲಿದೆ. ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ್ಯಾವ ಅಧಿಕಾರಿಯನ್ನು ಬೇಕು ಕರೆಸಿಕೊಂಡು ಮಾಹಿತಿ ಪಡೆಯಲಿ. ಆದರೆ ಸರ್ಕಾರ ಬೀಳಿಸಿ ಬಾಂಬೆಗೆ ಹೋಗಿದ್ದೇ ಸಿ.ಡಿ ಆಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತೊಂದು ಸ್ಫೋಟಕ ಬಹಿರಂಗಪಡಿಸಿದ್ರು.
undefined
ಜಾರಕಿಹೊಳಿ CD ಪ್ರಕರಣಕ್ಕೆ ಹೊಸ ಟ್ವಿಸ್ಟ್: ಇವರ ಕೈವಾಡ ಇದ್ಯಾ?
ಸಮ್ಮಿಶ್ರ ಸರ್ಕಾರ ಬೀಳಿಸಿದ ಬಗ್ಗೆ ಎಚ್. ವಿಶ್ವನಾಥ್ ಅಸಮಾಧಾನಗೊಂಡ ವಿಚಾರಕ್ಕೂ ಪ್ರತಿಕ್ರಯಿಸಿದರು. ವಿಶ್ವನಾಥ್ ಮಾತ್ರವಲ್ಲ, ಮಂತ್ರಿ ಆಗಿರುವವರೇ, ಆಂತರಿಕವಾಗಿ ಕೇಳಿದರೆ ಸರ್ಕಾರ ಮಾಡಿದ್ದು ಸರಿಯಲ್ಲ ಎಂದು ಹೇಳುತ್ತಾರೆ ಎಂದರು.
ನಾನು ಮೊನ್ನೆ ದಿನ ಬಿಜೆಪಿ ಹೇಳಿಕೆ ನೋಡಿದೆ. ಮಸ್ಕಿ ಅಭಿವೃದ್ಧಿಗೆ ಬಿಜೆಪಿಗೆ ಅಧಿಕಾರ ಕೊಡಿ ಎಂದು ಹೇಳಿದ್ದಾರೆ. ಈಗಾಗಲೇ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ. ಇವರೇ ತಾನೆ ಎರಡು ವರ್ಷದಿಂದ ಅಧಿಕಾರ ನಡೆಸುತ್ತಿರುವುದು. ನಾನು ಅಧಿಕಾರದಲ್ಲಿದ್ದಾಗ 500 ಕೋಟಿಗೂ ಹೆಚ್ಚಿನ ಅನುದಾನ ನೀಡಿದ್ದೆ. ಎರಡು ವರ್ಷದಲ್ಲಿ ಕೆಲಸ ಮಾಡಿಸಿದ್ದೇನೆ ಎಂದು ಹೇಳಿದರು.
CD ಕೇಸ್: ರಮೇಶ್ ಜಾರಕಿಹೊಳಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಬಿಜೆಪಿ
ಮಸ್ಕಿ ಬಿಜೆಪಿ ಅಭ್ಯರ್ಥಿ ಅಧಿಕಾರ ತ್ಯಾಗ ವಿಚಾರದ ಬಗ್ಗೆ ಮಾತನಾಡಿದ ಅವರು, ಜನಕ್ಕೆ ತ್ಯಾಗ ಮಾಡಿಲ್ಲ, ಬಿಜೆಪಿ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದ್ದಾರೆ. ಹೋದಕಡೆ ಗ್ರಾಮಗಳನ್ನು ದತ್ತು ತೆಗೆದುಕೊಳ್ಳುವುದಾಗಿ ಹೇಳುತ್ತಿದ್ದರು. ಶಿರಾದಲ್ಲಿ ಮಗದೂರು ಕೆರೆ ತೋಡಿ ಈಗ ಬತ್ತಿಹೋಗಿದೆ. ರಾಜ್ಯ ಅಭಿವೃದ್ಧಿ ಲೂಟಿ ಆಗುತ್ತಿದೆ. ಜನರು ಸರಿಯಾದ ತೀರ್ಮಾನ ತೆಗೆದುಕೊಳ್ಳಿ. ನಷ್ಟ ನಮಗಲ್ಲ, ಜನರಿಗೆ ಆಗುವುದು ಎಂದು ತಿಳಿಸಿದರು.