'ಜೆಡಿಎಸ್ ಬಾಗಿಲು ತೆರೆದಿರುತ್ತೆ: ಬರುವವರು ಬರಬಹುದು, ಹೋಗೋರು ಹೋಗಬಹುದು'

Published : Sep 01, 2021, 07:22 PM IST
'ಜೆಡಿಎಸ್ ಬಾಗಿಲು ತೆರೆದಿರುತ್ತೆ: ಬರುವವರು ಬರಬಹುದು, ಹೋಗೋರು ಹೋಗಬಹುದು'

ಸಾರಾಂಶ

* ಜೆಡಿಎಸ್ ತೊರೆಯಲು ಸಿದ್ಧರಾಗಿರುವ ಜಿಟಿ ದೇವೇಗೌಡಗೆ ಟಾಂಗ್ ಕೊಟ್ಟ ಎಚ್‌ಡಿಕೆ * ಬರುವವರು ಬರಬಹುದು, ಹೋಗೋರು ಹೋಗಬಹುದು ಎಂದ ಕುಮಾರಸ್ವಾಮಿ * ವಿಧಾನಸಭಾ ಚುನಾವಣಾ  ಸಿದ್ಧತೆಗೆ ತೋಟದಲ್ಲಿ ಎರಡು ದಿನದ ಕಾರ್ಯಗಾರ

ಬೆಂಗಳೂರು, (ಸೆ.01): ವಿಧಾನಸಭಾ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಬಾಕಿ ಇದೆ. ಆಗಲೇ ರಾಜ್ಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ.

 ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಪಕ್ಷ ತೊರೆದು ಕಾಂಗ್ರೆಸ್ ಸೇರುವುದಾಗ ಹೇಳಿಕೊಂಡ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಜೆಡಿಎಸ್ ಬಾಗಿಲು ದೊಡ್ಡದಾಗಿ ತೆರೆದಿದೆ. ಬರುವವರು ಬರಬಹುದು, ಹೋಗೋರು ಹೋಗಬಹುದು ಎಂದಿದ್ದಾರೆ.

ಜೆಡಿಎಸ್-ಕಾಂಗ್ರೆಸ್‌ ನಡುವೆ ಶುರುವಾಯ್ತು ಫ್ಯೂಸ್ ಫೈಟ್

ಎರಡು ವರ್ಷದ ಹಿಂದೆನೇ ಪಕ್ಷದಿಂದ ದೂರ ಸರಿದಿದ್ದೇನೆ ಎಂದು ಅವರೇ ಹೇಳಿದ್ದಾರೆ. ಈಗ ಒಂದು ನೆಪ ಹೇಳಿ ಹೋಗೋಕೆ ಮುಂದಾಗಿದ್ದಾರೆ. ದ್ರಾಕ್ಷಿ ಕೈಗೆಟುಕದಿದ್ದಾಗ ನರಿ ಹೇಳುವ ಕಥೆಯಂತಾಗಿದೆ. ಈಗ ನನ್ನಿಂದ ಹೊರಹೋಗುವುದಾದರೆ 2008 ರಲ್ಲಿ ಯಾವ ಕಾರಣಕ್ಕಾಗಿ ಬಿಜೆಪಿಗೆ ಹೋದರು ಎಂದು  ಜಿಟಿಡಿಗೆ ಟಾಂಗ್‌ ಕೊಟ್ಟರು.

ಮುಂದಿನ 2023ರ ವಿಧಾನಸಭಾ ಚುನಾವಣಾ ವಿಚಾರವಾಗಿ ಪ್ರತಿಕ್ರಿಯಿಸಿದ ಎಚ್‌ಡಿಕೆ, ಮೊದಲ ಹಂತದಲ್ಲಿ 108 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗುವುದು. ಇನ್ನೂ ಎಂಟತ್ತು ಅಭ್ಯರ್ಥಿಗಳ ಹೆಸರು ಪಟ್ಟಿಗೆ ಸೇರಿಕೊಳ್ಳಬಹುದು ಎಂದರು.

 ಸಿದ್ಧತೆ ದೃಷ್ಟಿಯಿಂದ ಎಲ್ಲರಿಗೂ ನನ್ನ ತೋಟದಲ್ಲೇ ಕಾರ್ಯಗಾರ ನಡೆಯಲಿದೆ. ಬಿಡದಿಯ ನನ್ನ ತೋಟದ ಮನೆಯಲ್ಲಿ ಎರಡು ದಿನದ ಕಾರ್ಯಗಾರ ನಡೆಯಲಿದೆ. ಮಿಷನ್ 123 ಅನ್ನೋದು ನನ್ನ ಸ್ಪಷ್ಟ ಧ್ಯೇಯ. ಮುಂದಿನ ಬಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌