
ಬೆಂಗಳೂರು, (ಏ.17): ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೊನೆಗೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಮಾರಸ್ವಾಮಿ ಅವರಿಗೆ ಇಂದು (ಶನಿವಾರ) ಬೆಳಗ್ಗೆ ಕೊರೋನಾ ಸೋಂಕು ದೃಢವಾಗಿದ್ದು, ಬೆಡ್ ಇಲ್ಲದೇ ನಿವಾಸದಲ್ಲಿಯೇ ಕ್ವಾರಂಟೈನ್ ಆಗಿದ್ದರು.
ಇದೀಗ ಬನ್ನೇರುಘಟ್ಟ ರಸ್ತೆ ಬಳಿಯಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಕುಮಾರಸ್ವಾಮಿ ಪರದಾಡಿದ್ದರು.
ಎಚ್‌ಡಿಕೆಗೆ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲವೇ? ಸ್ಪಷ್ಟನೆ ಕೊಟ್ಟ ಸಚಿವ ಸುಧಾಕರ್
ನಂತರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ದೂರವಾಣಿ ಕರೆ ಮಾಡಿ ಇರುವ ಸ್ಥಳದಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದರು. ಇದೀಗ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಎಚ್‌ಡಿಕೆ, ನನಗೆ ಇಂದು ಬೆಳಿಗ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಹೃದ್ರೋಗ ಆಸ್ಪತ್ರೆ ಯ ಮುಖ್ಯಸ್ಥರಾದ ಡಾಕ್ಟರ್ ಮಂಜುನಾಥ್ ಹಾಗೂ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾಕ್ಟರ್ ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಕಾಯ್ದಿರಿಸಿದ್ದರು. ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಎಂದಿದ್ದಾರೆ.
ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಗಿ ಆಗಬೇಕಾಗಿದ್ದರಿಂದ ಮಧ್ಯಾಹ್ನ ನಂತರ ಅಪೋಲೋ ಆಸ್ಪತ್ರೆಗೆ ದಾಖಲಾದೆ. ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲೇ ಕೊರೊನಾ ಚಿಕಿತ್ಸೆ ಪಡೆಯಲು ತೀರ್ಮಾನಿಸಿ, ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಎಲ್ಲರಿಗೂ ನನ್ನ ಪ್ರಣಾಮಗಳು ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.